ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಕೊನೆಗೂ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾಗಿದ್ದಾರೆ.
ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ಗುಡ್ಬೈ ಹೇಳಿ ಮುಖ್ಯವಾಹಿನಿಗೆ ಬಂದಿದ್ದಾರೆ.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ, ಡಿಜಿ ಐಜಿಪಿ ಅಲೋಕ್ ಮೋಹನ್, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಶರಣಾಗತಿಯಾದ ಆರು ನಕ್ಸಲರ ಕುಟುಂಬದವರು ಉಪಸ್ಥಿತರಿದ್ದರು.
ಪೊಲೀಸ್ ಭದ್ರತೆಯೊಂದಿಗೆ ನಕ್ಸಲರನ್ನು ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಗೆ ಸಂಜೆ ಹೊತ್ತಿಗೆ ಕರೆತರಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ನಕ್ಸಲರು ಭೇಟಿಯಾದರು. ಈ ವೇಳೆ ನಕ್ಸಲರ ಜೊತೆ ಸಿಎಂ ಮಾತುಕತೆ ನಡೆಸಿದರು.



