November 8, 2025

 

 

ಶಾ ಕಾರ್ಯಕರ್ತೆಯರ ಮುಷ್ಕರ ಮೂರನೇ ದಿನಕ್ಕೆ ಕಾಲಿರಿಸಿದೆ.  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ರಾಜ್ಯದ ಆಶಾ ಕಾರ್ಯಕರ್ತೆಯರು  ತಮ್ಮ ಮುಷ್ಕರವನ್ನು ಮುಂದುವರೆಸಿದ್ದಾರೆ.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್‌ನಲ್ಲಿ  ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಅವರು, ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು.

ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್‌ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯ ಚಟುವಟಿಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುತ್ತದೆ. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9,500 ರೂ.ಪಾವತಿ ಮಾಡಲಾಗುತ್ತಿದೆ. ಇದನ್ನು ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸರ್ಕಾರ ಸಿದ್ಧವಿದೆ. ಆದರೆ, ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ ಪ್ರೋತ್ಸಾಹಧನವನ್ನೂ ಮಾಸಿಕ ವೇತನದ ರೂಪದಲ್ಲಿ ನಿಗದಿಪಡಿಸಿ ನೀಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ ಎಂದು ಹೇಳಿದರು.

ಬುಧವಾರ ಹೋರಾಟ ಬೆಂಬಲಿಸಿ ಮಾತನಾಡಿದ ವಿಶ್ರಾಂತ ಲೋಕಾಯುಕ್ತ ಎನ್. ಸಂತೋಷ್‌ ಹೆಗ್ಡೆ, ಜೀವನಕ್ಕೆ ಅವಶ್ಯಕವಾದ ವೇತನವನ್ನು ಪಡೆಯುವುದು ಮಾನವನ ಹಕ್ಕಾಗಿದ್ದು, ರಾಜ್ಯ ಸರಕಾರವು ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ವೇತನವನ್ನು ನಿರಾಕರಿಸುತ್ತಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದರು. ಜೀವನಕ್ಕೆ ಅವಶ್ಯಕವಾದದನ್ನು ವೇತನ ರೂಪದಲ್ಲಿ ಇರಲೀ ಅಥವಾ ಇನ್ಯಾವುದೇ ಯಾವುದೇ ರೂಪದಲ್ಲಿ ಕೊಡಬೇಕಾಗಿರುವುದು ಸರಕಾರದ ಮೊದಲ ಕರ್ತವ್ಯ. ಇದನ್ನು ನಿರಾಕರಿಸುವುದರೆ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದರು.

ಸರಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ಬದಲು ಭರವಸೆಗಳನ್ನು ನೀಡುತ್ತಾ, ಖಜಾನೆಯಲ್ಲಿ ಹಣವಿಲ್ಲ ಎನ್ನುತ್ತಿದೆ. ಆದರೆ ಸರಕಾರ ಮಾಡುತ್ತಿರುವ ದುಂದುವೆಚ್ಚಗಳಿಗೆ ಕಡಿವಾಣ ಹಾಕಿದರೆ, ಈ ಬೇಡಿಕೆಗಳನ್ನು ಈಡೇರಿಸುವುದು ಕಷ್ಟಕರವಲ್ಲ. ರಾಜ್ಯದ ಅಶಾ ಕಾರ್ಯಕರ್ತೆಯರಲ್ಲಿ ಒಂದು ಒಗ್ಗಟ್ಟಿದೆ. ಈ ಒಗ್ಗಟ್ಟಿನ ಮೂಲಕ ಸರಕಾರಗಳಿಗೆ ಒಂದು ಸಂದೇಶವನ್ನು ನೀಡಬೇಕು ಎಂದು ಕರೆ ನೀಡಿದರು.

ರಾಜ್ಯ ಸಂಯುಕ್ತ ಆಶಾಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ ಸೋಮಶೇಖರ್ ಯಾದಗಿರಿ ಮಾತನಾಡಿ, ರಾಜ್ಯ ಸರಕಾರವು ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟವನ್ನು ಮುಂದುವರೆಸಲಾಗುವುದು ಎಂದರು.

ಇದೇ ವೇಳೆ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎ.ಮುರಿಗೆಪ್ಪ, ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಸೇರಿದಂತೆ ಮತ್ತಿತತರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ