November 8, 2025

 

 

ಈಜಲು ಸಮುದ್ರಕ್ಕೆ ಇಳಿದಿದ್ದ ಮೂವರು ನೀರಿನಲ್ಲಿ ಮುಳುಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಈ ದಾರುಣ ಘಟನೆ ಮಂಗಳೂರಿನ ಕುಳಾಯಿ ಜೆಟ್ಟಿ ಸಮೀಪದ ಕಡಲತೀರದಲ್ಲಿ ಬುಧವಾರ ನಡೆದಿದೆ.

ಮೃತರಾದ ಚಿತ್ರದುರ್ಗ ಜಿಲ್ಲೆ ಉಪ್ಪರಿಗೇನಹಳ್ಳಿಯ ಶಿವಲಿಂಗಪ್ಪ ಅವರ ಪುತ್ರ ಎಂ.ಎಸ್.ಮಂಜುನಾಥ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30), ಮತ್ತು ಬೆಂಗಳೂರಿನ ಜೆಪಿ ನಗರದ ಸತ್ಯವೇಲು (30), ಘಟನೆಯಲ್ಲಿ ಬೀದರ್ ಜಿಲ್ಲೆಯ ಹಂಗರಗಾ ಮೂಲದ ಪರಮೇಶ್ವರ (30) ಬದುಕುಳಿದಿದ್ದಾರೆ.
ಶಿವಕುಮಾರ್, ಸತ್ಯವೇಲು ಮತ್ತು ಮಂಜುನಾಥ್ ಅವರ ಮೃತದೇಹಗಳು ಜೆಟ್ಟಿಯ ಬಲಭಾಗದಲ್ಲಿ ಪತ್ತೆಯಾಗಿವೆ. ಮೃತದೇಹಗಳನ್ನು ನಗರದ ಎಜೆ ಆಸ್ಪತ್ರೆಗೆ ರವಾನಿಸಲಾಗಿದೆ.

ನಾಲ್ವರು ಯುವಕರು ಬೆಂಗಳೂರಿನ ಎಎಂಸಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಆತ್ಮೀಯ ಗೆಳೆಯರಾಗಿದ್ದರು. ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟಿದ್ದ ಅವರು ಬುಧವಾರ ಬೆಳಗ್ಗೆ ಮಂಗಳೂರಿಗೆ ಬಂದಿದ್ದರು.

ಹೋಟೆಲ್‌ನಲ್ಲಿ ಉಪಹಾರ ಸೇವಿಸಿ, ಮಧ್ಯಾಹ್ನ ಕುಳಾಯಿ ಜೆಟ್ಟಿಗೆ ತೆರಳಿದರು. ಸಮುದ್ರದಲ್ಲಿ ಆಟವಾಡುತ್ತಿದ್ದಾಗ ನಾಲ್ವರೂ ನೀರಿನಲ್ಲಿ ಸಿಲುಕಿಕೊಂಡರು. ಸ್ಥಳೀಯ ಮೀನುಗಾರರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಸಹಾಯ ಬರುವ ಮೊದಲು ಮೂವರು ಯುವಕರು ನೀರಿನಲ್ಲಿ ಮುಳುಗಿದರು. ಅವರಲ್ಲಿ ಒಬ್ಬನನ್ನು ರಕ್ಷಿಸಲಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು.

ಸುದ್ದಿ ತಿಳಿಯುತ್ತಿದ್ದಂತೆ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನೆ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ