ತೆರಿಗೆ ವಸೂಲಾತಿ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಆರೋಪದ ಮೇಲೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಪಿಡಿಒ ಸೋಮೇಗೌಡ ಎಚ್.ಜಿ. ಅವರನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಆದೇಶ ಹೊರಡಿಸಿದ್ದಾರೆ.
ಪಂಚಾಯಿತಿಯಲ್ಲಿ ತೆರಿಗೆ ವಸೂಲಾತಿ ಹಣವನ್ನು ದುರುಪಯೋಗ ಮಾಡಿಕೊಂಡಿರುವ ದೂರಿನ ಕುರಿತು ಸಕಲೇಶಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಿಶೀಲನೆ ನಡೆಸಿದ್ದಾರೆ.
ಕರ ವಸೂಲಿ ಬಿಲ್ ಕಲೆಕ್ಟೆರ್ ಹಣ ದುರ್ಬಳಕೆ ಬಗ್ಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರು ಇತ್ತೀಚೆಗೆ ಪಂಚಾಯತಿ ಮುಂಭಾಗ ಬೃಹತ್ ಪ್ರತಿಭಟನೆ ನೆಡೆಸಿ ಕರ ವಸೂಲಿಗಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಯನ್ನು ಅಮಾನತುಗೊಳಿಸುವಂತೆ ಅಗ್ರಹಿಸಿದ್ದರು.
ಇದೀಗ ತನಿಖೆ ನಡೆಸಿರುವ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಬಾಳ್ಳುಪೇಟೆ ಗ್ರಾಮ ಪಂಚಾಯಿತಿಯಲ್ಲಿ ಸುಮಾರು 45 ಲಕ್ಷದಷ್ಟು ತೆರಿಗೆ ಹಣ ದುರುಪಯೋಗವಾಗಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಪಿಡಿಓ ಸೋಮೇಗೌಡ ಅವರನ್ನು ಅಮಾನತು ಮಾಡಲಾಗಿದೆ.



