 
                
ಕರ್ತವ್ಯಲೋಪ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆ ಠಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಹಲವು ಪ್ರಕರಣಗಳಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶೃಂಗೇರಿ ಪಿಎಸ್ಐ ಜಕ್ಕಣ್ಣನವರ್ ಅಮಾನತ್ತು ಗೊಂಡಿದ್ದಾರೆ.
ಜಕ್ಕಣ್ಣನವರ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಅಕ್ರಮ ಮರಳು ದಂಧೆ, ಇಸ್ಪೀಟ್ ಅಡ್ಡೆ ರೈಡ್ ಸೇರಿದಂತೆ ಹಲವು ಪ್ರಕರಣಗಳಲ್ಲಿ ಇವರು ಕರ್ತವ್ಯ ಲೋಪ ಹೊರಿಸಿ ಅಮಾನತು ಮಾಡಲಾಗಿದೆ. ಇತ್ತೀಚೆಗೆ ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ಕುಟುಂಬವೊಂದರ ಮೇಲೆ ಸ್ಥಳೀಯ ಯುವಕರ ತಂಡವೊಂದು ಹಲ್ಲೆ ನಡೆಸಿದ್ದ ಪ್ರಕರಣದಲ್ಲಿಯೂ ಇವರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಅಮಾನತು ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ.
ಶೃಂಗೇರಿ ಭಾಗದಲ್ಲಿ ಎಗ್ಗಿಲ್ಲದೆ ಮರಳು ದಂಧೆ, ಜೂಜಾಟ ನಡೆಯುತ್ತಿದ್ದು, ಅದಕ್ಕೆ ಬೆಂಬಲ ನೀಡಿದ ಆರೋಪವೂ ಇವರ ಮೇಲಿದೆ.


 
 

 
                                                         
                                                         
                                                         
                                                         
                                                         
                                                        