
ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.
ಫೆಬ್ರುವರಿ 9ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ ಘೋಷಿಸಿದ್ದರು. ಆ ಬಳಿಕ ಉತ್ತರಾಧಿಕಾರಿ ಆಯ್ಕೆಯಲ್ಲಿ ಆಡಳಿತ ಬಿಜೆಪಿ ಪಕ್ಷದಲ್ಲಿ ಒಮ್ಮತವಿಲ್ಲದೇ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ವಿಫಲವಾದ ಹಿನ್ನೆಲೆ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.
ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು. ಮಣಿಪುರದಲ್ಲಿ 21 ತಿಂಗಳಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಇದಾದ ನಂತರ ಬಿರೇನ್ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.