November 1, 2025

 

 

ದಿನಾಂಕ: 28.02.2025 ರಂದು ಚಿಕ್ಕಮಗಳೂರು ನಗರದ ಐ.ಡಿ.ಎಸ್‌.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರ ವಿಧಾನಪರಿಷತ್‌ ಚುನಾವಣೆ 2021ರ ಮರು ಮತ ಎಣಿಕೆ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ಧಾರೆ. ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಫೆಬ್ರವರಿ 28 ರಂದು ಮದ್ಯಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯಮಾರಾಟ ನಿಷೇದಿಸಲಾಗಿದೆ.

ಹಾಗೆಯೇ ಮತಎಣಿಕೆ ನಡೆಯುವ ಚಿಕ್ಕಮಗಳೂರು ನಗರದ ಐ ಡಿ ಎಸ್ ಜಿ ಕಾಲೇಜು ಆವರಣದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

2021ರಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ 12 ಮಂದಿ ನಾಮನಿರ್ದೇಶನ ಸದಸ್ಯರು ಮತ ಚಲಾಯಿಸಿದ್ದರು. ಚುನಾವಣೆಯಲ್ಲಿ ಪರಾಭವಗೊಂಡಿದ್ದ ಕಾಂಗ್ರೇಸ್ ಗಾಯತ್ರಿ ಶಾಂತೇಗೌಡ ಅವರು ಚುನಾವಣೆ ಫಲಿತಾಂಶವನ್ನು ಪ್ರಶ್ನಿಸಿ ನಾಮನಿರ್ದೇಶನ ಸದಸ್ಯರಿಗೆ ಮತದಾನದ ಹಕ್ಕು ನೀಡಿರುವುದು ನಿಯಮಬಾಹೀರ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ನ್ಯಾಯಾಲಯ ಸದರಿ ಚುನಾವಣೆಯ ಮರು ಮತ ಎಣಿಕೆಗೆ ಆದೇಶ ನೀಡಿದ್ದು, ನಾಮನಿರ್ದೇಶನ ಸದಸ್ಯರ ಮತಗಳನ್ನು ಹೊರಗಿಟ್ಟು ಮರು ಮತ ಎಣಿಕೆ ನಡೆಸಿ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ  ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಫೆಬ್ರುವರಿ 28 ಕ್ಕೆ ಮರು ಮತ ಎಣಿಕೆಗೆ ಸಮಯ ನಿಗದಿ ಮಾಡಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ