
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಒಟ್ಟಾಗಿ ಹೋರಾಡಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಆ ಮೂಲಕ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ ಎಂದು ಘೋಷಿಸಿದ್ದಾರೆ.
ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದ ಅಮಿತ್ ಶಾ, ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಚುನಾವಣೆ ಎದುರಿಸಲಿದೆ ಎಂದು ತಿಳಿಸಿದ್ದಾರೆ.
ಎಐಎಡಿಎಂಕೆ, ಬಿಜೆಪಿ ಮತ್ತು ಎಲ್ಲಾ ಮೈತ್ರಿ ಪಕ್ಷಗಳು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಯಾಗಿ ಸ್ಪರ್ಧಿಸಲಿವೆ ಎಂದು ಅಮಿತ್ ಶಾ ಹೇಳಿದ್ದಾರೆ.
2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ ಸಿಗಲಿದೆ ಎಂಬ ಆಶಯವನ್ನು ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಚುನಾವಣೆಗೆ ಈಗಿಂದಲೇ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ತನ್ನ ಛಾಪು ಮೂಡಿಸಬೇಕು ಎಂದು ಶತಾಯುಗತಾಯು ಪ್ರಯತ್ನದಲ್ಲಿ ತೊಡಗಿರುವ ಬಿಜೆಪಿ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದೆ.
ಅದರ ಮೊದಲ ಅಂಗವಾಗಿ ಎಐಡಿಎಂಕೆ ಜೊತೆ ಮೈತ್ರಿಗೆ ಪೂರಕವಾಗಿ ಅಣ್ಣಾಮಲೈ ಅವರನ್ನು ಬಿಜೆಪಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.