
ಬೆಂಗಳೂರಿನ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ನೀಡಿಲ್ಲ ಎಂಬ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ.
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.
ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು, ‘ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ ಎಂದು ಹೇಳಿದ್ದರು.