ಅಹ್ಮದಾಬಾದ್ ನಲ್ಲಿ ಪತನವಾದ ಏರ್ ಇಂಡಿಯಾ ವಿಮಾನ ದುರಂತ ಘಟನೆಯಲ್ಲಿ ಓರ್ವ ಪ್ರಯಾಣಿಕನನ್ನು ಬಿಟ್ಟು ಯಾರೂ ಉಳಿದಿಲ್ಲ ಎಂದು ಏರ್ ಇಂಡಿಯಾ ಮೂಲಗಳು ಮಾಹಿತಿ ನೀಡಿದ್ದು, 241 ವಿಮಾನ ಪ್ರಯಾಣಿಕರಲ್ಲದೇ 5 ಹಾಸ್ಟೆಲ್ ವಿದ್ಯಾರ್ಥಿಗಳೂ ಕೂಡ ಸಾವನ್ನಪ್ಪಿದ್ದಾರೆ. ಒಟ್ಟು ಇದುವರೆಗೆ ಈ ದುರ್ಘಟನೆಯಲ್ಲಿ 246 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗುಜರಾತ್ ರಾಜಧಾನಿ ಅಹಮದಾಬಾದ್ ಏರ್​ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಸೆಕೆಂಡ್ ಗಳಲ್ಲಿ ಪತನಗೊಂಡಿದೆ.

ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದ್ದು ಬೋಯಿಂಗ್ 787-8 ಡ್ರೀಮ್‌ಲೈನರ್ (AI-171) ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು.

ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್  ಮೇಲೆ ಬಿದ್ದಿದೆ.

ವಿಮಾನ ದುರಂತ ಘಟನೆಯಲ್ಲಿ ಓರ್ವ ಪ್ರಯಾಣಿಕನನ್ನು ಬಿಟ್ಟು ಯಾರೂ ಉಳಿದಿಲ್ಲ, ವಿಮಾನ ಪ್ರಯಾಣಿಕರಲ್ಲದೇ 5 ಹಾಸ್ಟೆಲ್ ವಿದ್ಯಾರ್ಥಿಗಳೂ ಕೂಡ ಸಾವನ್ನಪ್ಪಿದ್ದಾರೆ.

246 ಮಂದಿ ಸಾವು

ಈ ದುರಂತದಲ್ಲಿ ಒಟ್ಟು 246 ಮಂದಿ ಸಾವಿಗೀಡಾಗಿದ್ದು, ಈ ಪೈಕಿ 229 ವಿಮಾನ ಪ್ರಯಾಣಿಕರು, 10 ಮಂದಿ ವಿಮಾನ ಸಿಬ್ಬಂದಿ, ಇಬ್ಬರು ಪೈಲಟ್ ಗಳು, ಐವರು ಮೆಡಿಕಲ್ ವಿದ್ಯಾರ್ಥಿಗಳು ಸೇರಿದ್ದರು.

ವಿಮಾನದಲ್ಲಿ 242 ಜನರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎಂದು ತಿಳಿದುಬಂದಿದೆ.

ವಿಮಾನ ಢಿಕ್ಕಿಯಾದ ಬಿಜೆ ವೈದ್ಯಕೀಯ ಕಾಲೇಜಿನ 5 ಮಂದಿ ಹಾಸ್ಟೆಲ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ

ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಿಜಯ್ ರೂಪಾನಿ ಅವರು ಕುಟುಂಬ ಸದಸ್ಯರ ಭೇಟಿ ಮಾಡಲು ಲಂಡನ್ ತೆರಳುತಿದ್ದರು ಎಂದು ತಿಳಿದುಬಂದಿದೆ.

ವಿಜಯ್ ರೂಪಾನಿಯವರು 2017 ರ ಆಗಸ್ಟ್ ನಿಂದ 2021 ರ ಸೆಪ್ಟಂಬರ್ ವರೆಗೆ ಐದು ವರ್ಷಗಳ ಕಾಲ ಗುಜರಾಜ್ ನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಏಕೈಕ ಪ್ರಯಾಣಿಕ ಸಾವಿನಿಂದ ಪಾರು !

ವಿಮಾನ ದುರಂತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪ್ರಯಾಣಿಕರೊಬ್ಬರು ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪಾರಾಗಿದ್ದಾರೆ. ವಿಮಾನದಲ್ಲಿ 11ಎ ಸೀಟ್ ನಲ್ಲಿ ಕುಳಿತಿದ್ದ ವಿಶ್ವಾಸ್ ಕುಮಾರ್ ರಮೇಶ್ ಎಂಬುವವರು ಬದುಕುಳಿದ ಅದೃಷ್ಠವಂತ. ಅನಿವಾಸಿ ಭಾರತೀಯ ರಮೇಶ್ ತನ್ನ ಸಹೋದರನೊಂದಿಗೆ ಲಂಡನ್ ಗೆ ಪ್ರಯಾಣ ಬೆಳೆಸುತ್ತಿದ್ದರು. ಅವರು ಎಮರ್ಜೆನ್ಸಿ ವಿಂಡೋದ ಬಳಿಯೇ ಕುಳಿತ್ತಿದ್ದರು. ಹಾಗಾಗಿ ಸಾವಿನಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ.

ವಿಶ್ವದಾದ್ಯಂತ ಸಂತಾಪ 

ವಿಮಾನ ದುರಂತದ ಬಗ್ಗೆ ಇಡೀ ವಿಶ್ವವೇ ಸಂತಾಪ ವ್ಯಕ್ತಪಡಿಸಿದೆ. ವಿವಿಧ ದೇಶಗಳ ಪ್ರಮುಖರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ