
ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಎಲೆಕಲ್ ಘಾಟಿ ಬಳಿ ನಡೆದಿದೆ.
ಬಾಳೆಹೊನ್ನೂರು ಸಮೀಪದ ಕಡಬಗೆರೆ ಬಿಳುಕೊಪ್ಪ ಮೂಲದ ಅನಿಲ್ ಪಾಯ್ಸ್ (55) ಮೃತ ದುರ್ದೈವಿ.
ಮೃತ ಅನಿಲ್ ಬೈಕ್‌ನಲ್ಲಿ ಬಾಳೆಹೊನ್ನೂರಿಗೆ ಹೋಗುತ್ತಿದ್ದರು. ಈ ವೇಳೆ ಎಲೆಕಲ್ ಘಾಟಿ ಬಳಿ ಹೋಗುವಾಗ ಭಾರೀ ಗಾಳಿ-ಮಳೆಗೆ ರಸ್ತೆಪಕ್ಕದಲ್ಲಿದ್ದ ಒಣಗಿದ ಮರ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು.
ಈ ವೇಳೆ ಸ್ಥಳಕ್ಕೆ ಬಾಳೆಹೊನ್ನೂರು ಪಿಎಸ್‌ಐ ರವೀಶ್ ಭೇಟಿ ನೀಡಿ, ಅಗ್ನಿಶಾಮಕ ವಾಹನದಲ್ಲೇ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತಲೆಗೆ ಭಾರೀ ಪೆಟ್ಟು ಬಿದ್ದ ಪರಿಣಾಮ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.