ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ.

ಮುಖ್ಯ ಅಡುಗೆಯವರಿಗೆ ಮಾಸಿಕ ಗೌರವಧನವನ್ನು 3,700 ರಿಂದ 4,700 ರೂ.ಗೆ ಹೆಚ್ಚಿಸಲಾಗಿದೆ. ಅಂತೆಯೇ ಅಡುಗೆ ಸಹಾಯಕರಿಗೆ 3,600 ರೂ.ನಿಂದ 4,600 ರೂ.ಗೆ ಹೆಚ್ಚಳ ಮಾಡಲಾಗಿದೆ.

ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಹಾಗೂ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ.

ಗೌರವ ಸಂಭಾವನೆಯನ್ನು ನೇರ ನಗದು ವರ್ಗಾವಣೆ ವೇದಿಕೆ ಮೂಲಕವೇ ಪಾವತಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ