October 21, 2025

 

 

ದುಬೈಯಲ್ಲಿ ನಡೆದ ಏಷ್ಯಾ ಕಪ್ ಟಿ20 ಪಂದ್ಯಾವಳಿಯಲ್ಲಿ ಭಾರತ ತಂಡ ಪಾಕ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟವನ್ನು ಪಡೆದಿದೆ.

ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ಪಾಪ್ ತಂಡವನ್ನು 146 ರನ್ನುಗಳಿಗೆ ಸೀಮಿತಗೊಳಿಸಿತು. ನಾಲ್ಕು ವಿಕೆಟ್ ಪಡೆದು ಪಾಕ್ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಸ್ಪಿನ್ನರ್ ಕುಲದೀಪ ಯಾದವ್ ಪ್ರಮುಖ ಪಾತ್ರ ವಹಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ಆರಂಭದಲ್ಲಿಯೇ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಜೊತೆಯಾದ ತಿಲಕ್ ವರ್ಮ ಮತ್ತು ಸಂಜು ಸ್ಯಾಮ್ಸಂಗ್ ಆನಂತರ ಶಿವಂದುಬೆ ಭಾರತ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು.

ಅಂತಿಮವಾಗಿ ಭಾರತ ತಂಡ 19.3 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಗೆಲುವಿನ ನಗೆ ಬೀರಿತು.

ತಿಲಕ್ ವರ್ಮ ಪದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರೆ ಅಭಿಷೇಕ್ ಶರ್ಮ ಶರಣ ಶ್ರೇಷ್ಠ ಪ್ರಶಸ್ತಿ ಪಡೆದರು.

ಸರಣಿಯಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಒಟ್ಟು ಮೂರು ಪಂದ್ಯಗಳನಾಡಿದ್ದು ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ

ಪಾಕ್ ಸಚಿವನಿಂದ ಟ್ರೋಪಿ ಪಡೆಯಲು ನಿರಾಕರಿಸಿದ ಭಾರತ

ಪಾಕಿಸ್ತಾನ ಸಚಿವ ಹಾಗೂ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಅಧ್ಯಕ್ಷ ಮೊಹ್ಸಿನ್‌ ನಖ್ವಿಯಿಂದ ಏಷ್ಯಾ ಕಪ್‌ ಚಾಂಪಿಯನ್ಸ್‌ ಟ್ರೋಫಿಯನ್ನು ಸ್ವೀಕರಿಸಲು ಭಾರತ ನಿರಾಕರಿಸಿದ ಪ್ರಸಂಗ ನಡೆಯಿತು.

2025 ರ ಏಷ್ಯಾಕಪ್‌ನ ಉದ್ವಿಗ್ನ ಮತ್ತು ರಾಜಕೀಯವಾಗಿ ತುಂಬಿದ ಪರಾಕಾಷ್ಠೆಯಲ್ಲಿ ಭಾರತೀಯ ಕ್ರಿಕೆಟ್ ತಂಡವು ಪಾಕಿಸ್ತಾನದ ಆಂತರಿಕ ಸಚಿವ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ವಿಜೇತರ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿತು. ಈ ಹಿನ್ನೆಲೆಯಲ್ಲಿ ಟ್ರೋಫಿ ಸ್ವೀಕಾರ ಸಮಾರಂಭದಲ್ಲಿ ವಿಳಂಬವಾಯಿತು.

ಎರಡೂ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು ಕ್ರೀಡಾ ಉದ್ವಿಗ್ನತೆಯನ್ನು ಪ್ರತಿಬಿಂಬಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ನಿರ್ದೇಶನದ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತು. ಇದು ಉಭಯ ದೇಶಗಳ ನಡುವಿನ ಸಂಘರ್ಷಕ್ಕೆ ಕಾರಣವಾಯಿತು. ಅಲ್ಲಿಂದ ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿದೆ.

ಇದು ಕ್ರಿಕೆಟ್‌ ತಂಡದ ಮೇಲೆಯೂ ಪರಿಣಾಮ ಬೀರಿತ್ತು. ಭಾರಿ ವಿರೋಧದ ನಡುವೆಯೂ ಟೀಂ ಇಂಡಿಯಾ ಏಷ್ಯಾ ಕಪ್‌ ಟೂರ್ನಿಯಲ್ಲಿ ಆಡಿತು. ಆದರೆ, ಪಾಕ್‌ ವಿರುದ್ಧದ ಪಂದ್ಯದಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿತು. ಪಾಕ್‌ ಆಟಗಾರರಿಗೆ ಹ್ಯಾಂಡ್‌ಶೇಕ್‌ ಮಾಡಲಿಲ್ಲ. ಹೀಗೆ, ಎರಡೂ ದೇಶಗಳ ನಡುವಿನ ಪಂದ್ಯದಲ್ಲಿ ಕ್ರಿಕೆಟ್‌ ನಿಯಮ ಉಲ್ಲಂಘನೆಯಂತಹ ಪ್ರಸಂಗಗಳು ನಡೆದವು.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ