October 21, 2025

 

 

ದಿನಾಂಕ 22.09.2025 ರಂದು ಸಖರಾಯಪಟ್ಟಣದಲ್ಲಿ ಚಿನ್ನಾಭರಣ ಅಂಗಡಿಯಿಂದ ಚಿನ್ನಾಭರಣ ಖರೀದಿ ಮಾಡಿ ಹಣವನ್ನು NEFT ಮುಖಾಂತರ ವರ್ಗಾವಣೆ ಮಾಡುವುದಾಗಿ ನಂಬಿಸಿ ರೂ. 3.5 ಲಕ್ಷ ಮೌಲ್ಯದ ಚಿನ್ನಾಭರಣ ಮೋಸದಿಂದ ತೆಗೆದುಕೊಂಡು ಹೋಗಿದ್ದ ಓರ್ವ ವ್ಯಕ್ತಿಯನ್ನು ಸಖರಾಯಪಟ್ಟಣ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.
ಆರೋಪಿಯಿಂದ ರೂ. 3.5 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ಕಾರು ಮತ್ತು ಒಂದು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿರುತ್ತದೆ. ಈತನು ತುಮಕೂರು, ಕೋಲಾರ, ಮೈಸೂರು, ಬೆಂಗಳೂರು ನಗರಗಳಲ್ಲಿ ಇದೇ ರೀತಿಯ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ತನಿಖೆಯಿಂದ ತಿಳಿದುಬಂದಿರುತ್ತದೆ.
ಆರೋಪಿ ಪತ್ತೆ ಮಾಡಿದ ಪೊಲೀಸ್ ತಂಡದಲ್ಲಿ ಪಿಎಸ್ಐ  ಪವನ್ ಕುಮಾರ್ ಸಿ ಸಿ ಮತ್ತು ಶ್ರೀಮತಿ. ಮಂಜುಳಾಬಾಯಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ   ದೇವರಾಜ,   ಅರುಣ್ ಕುಮಾರ್,  ಶಿವಕುಮಾರ್ ವಿ,   ವಸಂತಕುಮಾರ,   ಸಂದೇಶ,   ಮಂಜಪ್ಪ,   ರವಿನಾಯ್ಕ,  ರಘು,  ಕೃಷ್ಣಮೂರ್ತಿ ಮತ್ತು ಕಾರ್ತಿಕ್ ರವರು ಕಾರ್ಯನಿರ್ವಹಿಸಿರುತ್ತಾರೆ.
ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ ಪೊಲೀಸ್ ತಂಡಕ್ಕೆ ಜಿಲ್ಲಾ ಎಸ್ಪಿ ವಿಕ್ರಮ್ ಅಮಟೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ