 
                
ಶಿಕ್ಷಣ ಇಲಾಖೆಯಿಂದ ಕೊಪ್ಪದಲ್ಲಿ ಆಯೋಜಿಸಿದ್ದ ಚಿಕ್ಕಮಗಳೂರು ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೂಡಿಗೆರೆ ವುಡ್ ಬ್ರಿಡ್ಜ್ ಶಾಲೆಯ ಮಕ್ಕಳು ಅತ್ಯುತ್ತಮ ಸಾಧನೆ ತೋರಿದ್ದಾರೆ.
34 ಕೆಜಿ ವಿಭಾಗದಲ್ಲಿ ಮೂಡಿಗೆರೆ ವುಡ್ ಬ್ರಿಡ್ಜ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಹಂಡುಗುಳಿಯ ಈಶಾನ್ವಿ ಎಸ್ ಗೌಡ ಪ್ರಥಮ ಸ್ಥಾನ ಪಡೆದಿದ್ದು 42 ಕೆಜಿ ವಿಭಾಗದಲ್ಲಿ ಆರನೇ ತರಗತಿ ವಿದ್ಯಾರ್ಥಿನಿ ತಳವಾರದ ರುತ್ವಿಕಾ ತನವಿ ಪ್ರಥಮ ಸ್ಥಾನ ಹಾಗೂ 50 ಕೆಜಿ ವಿಭಾಗದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಬಾಳೆಗದ್ದೆಯ ಹೃಧ್ಯಾ ಕೆಎಂ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜೇತ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಮತ್ತು ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.



 
 

 
                                                         
                                                         
                                                         
                                                         
                                                         
                                                         
                                                        