November 1, 2025

 

 

1994ರ ನಂತರ ಇಲ್ಲಿಯವರೆಗೂ ಪ.ಪಂ. ನಿವಾಸಿಗಳಿಗೆ ನಿವೇಶನ ಕೊಡಲು ಸಾಧ್ಯವಾಗಿರಲಿಲ್ಲ. ಆದರೆ ಶಾಸಕರ ಮತ್ತು ಪ.ಪಂ.ಯ ಸದಸ್ಯರ ಪ್ರಯತ್ನದಿಂದ ಹೆಸಗಲ್ ಗ್ರಾ.ಪಂ. ವ್ಯಾಪ್ತಿಯ ಸರ್ವೆ ನಂ 102ರಲ್ಲಿ 5 ಎಕರೆ ಪ್ರದೇಶದಲ್ಲಿ ನಿವೇಶನಕ್ಕೆ ಕಾಯ್ದಿರಿಸಲಾಗಿದೆ ಎಂದು ಪ.ಪಂ. ಅಧ್ಯಕ್ಷ ಕೆ.ವೆಂಕಟೇಶ್ ಹೇಳಿದರು.
ಅವರು ಗುರುವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಪಟ್ಟಣ ವ್ಯಾಪ್ತಿಯ ನಿವೇಶನ ರಹಿತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಾಗಲೇ 1.ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದು, ಆದರೆ ಈಗ ಕಾಯ್ದಿರಿಸಿರುವ 5 ಎಕರೆಯಲ್ಲಿ ಕನಿಷ್ಟ 200 ನಿವೇಶನ ನೀಡಲು ಮಾತ್ರ ಸಾಧ್ಯವಾಗುತ್ತದೆ. ಹಾಗಾಗಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು. ಉಳಿದ ಫಲಾನುಭವಿಗಳಿಗೆ ಪ.ಪಂ. ವ್ಯಾಪ್ತಿಯ 3 ಕಿ,ಮೀ ಅಂತರದ ಬೀಜವಳ್ಳಿ, ಲೋಕವಳ್ಳಿ, ಬಿದರಹಳ್ಳಿ, ಕೊಲ್ಲಿಬೈಲ್ ಭಾಗದಲ್ಲಿ ನೂರಾರು ಎಕರೆ ಗೋಮಾಳ ಪ್ರದೇಶವಿದ್ದು, ಇದನ್ನು ನಿವೇಶನಕ್ಕಾಗಿ ಕಾಯ್ದಿರಿಸಲು ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.
ತಹಸೀಲ್ದಾರ್ ಎಸ್.ಅಶ್ವಿನಿ ಮಾತನಾಡಿ, ತಾಲೂಕಿಲ್ಲಿ ಪಟ್ಟಣ ಮಾತ್ರವಲ್ಲ. ತಾಲೂಕಿನಾಧ್ಯಂತ ನಿವೇಶನ ಸಮಸ್ಯೆ ಇದ್ದು, ಭೂಮಿ ಗುರುತಿಸುವ ಕಾರ್ಯ ನಡೆಯುತ್ತಿದೆ. ಕಾಯ್ದಿರಿಸಿದ ಭೂಮಿಯಲ್ಲಿ ನಿವೇಶನ ಒದಗಿಸಲು ಹಾಗೂ ಭೂಮಿ ಪತ್ತೆ ಕಾರ್ಯ ನಡೆಸಲು ಕೆಲವರಿಂದ ತಕರಾರು ಅರ್ಜಿಗಳು ಹಾಗೂ ಇತರೇ ಸಮಸ್ಯೆಗಳು ಎದುರಾಗುತ್ತಿದೆ. ಇದನ್ನು ಬಗೆಹರಿಸಲು ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಪ.ಪಂ. ಉಪಾಧ್ಯಕ್ಷ ರಮೇಶ್ ಹೊಸ್ಕೆರೆ, ಸದಸ್ಯರಾದ ಧರ್ಮಪಾಲ್, ಮನೋಜ್, ಆಶಾ ಮೋಹನ್, ಗೀತಾ ರಂಜನ್ ಅಜಿತ್‍ಕುಮಾರ್, ಕಮಲಮ್ಮ, ಕುರ್ಷಿದ್‍ಭಾನು, ಹಂಜಾ, ಜಯಮ್ಮ ಮತ್ತಿತರರಿದ್ದರು.
*****

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ