ವಿದ್ಯುತ್ ಸ್ಪರ್ಶದಿಂದ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಹೊಲದಲ್ಲಿದ್ದ ನೀರಿನ ಮೋಟರ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಕುಸಿದು ಬಿದ್ದು ವಿವೇಕ್ (14) ಸಾವಪ್ಪಿದ್ದಾನೆ.
ಚಿಕ್ಕಮಗಳೂರು ತಾಲೂಕು ಮಲ್ಲೇನಹಳ್ಳಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿವೇಕ್ ,ಇಂದು ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಶಾಲೆಗೆ ತೆರಳದೆ ಹೊಲಕ್ಕೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ.
ಮಗನ ಅಕಾಲಿಕ ಸಾವಿನಿಂದ ಪೋಷಕರು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮಟ್ಟಿದೆ.
ಮೃತ ವಿವೇಕ್ ಮಲ್ಲೇನಹಳ್ಳಿ ಸಮೀಪದ ನಿಂಗೇನಹಳ್ಳಿ ನಿವಾಸಿ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




