November 8, 2025

 

 

ಕೊಟ್ಟಿಗೆಹಾರದಿಂದ ಗಂಗಮೂಲಕ್ಕೆ ಸಾಗುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚಾರವೇ ಸಾಹಸದಂತಾಗಿದೆ. ರಸ್ತೆಯಾದ್ಯಂತ ಉಂಟಾದ ದೊಡ್ಡ ದೊಡ್ಡ ಗುಂಡಿಗಳಿಂದಾಗಿ ವಾಹನಗಳು ಓಡಿಸುವುದು ಕಷ್ಟವಾಗಿದ್ದು, ಹಲವು ಸ್ಥಳಗಳಲ್ಲಿ ಅಪಘಾತ ಸಂಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸದ್ಯಕ್ಕೆ ನಿಡುವಾಳೆ ಗ್ರಾಮಸ್ಥರು, ಆಟೋ ಮಾಲೀಕರು ಹಾಗೂ ಚಾಲಕರು ತಾತ್ಕಾಲಿಕವಾಗಿ ಗುಂಡಿಗಳಿಗೆ ಮಣ್ಣನ್ನು ತುಂಬಿ ಸಂಚಾರಕ್ಕೆ ಅನುಕೂಲ ಮಾಡಿಕೊಳ್ಳುತ್ತಿದ್ದಾರೆ. ಆದರೆ ಶೀಘ್ರದಲ್ಲೇ ರಸ್ತೆ ದುರಸ್ತಿ ಕೈಗೊಳ್ಳದಿದ್ದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ನಿಡುವಾಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ. ರಸ್ತೆ ದುರಸ್ತಿ ಮಾಡುವಂತೆ ಹಲವಾರು ಬಾರಿ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ ಸದ್ಯದಲ್ಲೇ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬ್ಯಾಂಡ್ ರವಿ, ಸಾಗರ್, ಯೋಗೇಶ್, ಪ್ರವೀಣ್, ಚೇತನ್ ಶರ್ಮ ಹಾಗೂ ನವೀನ್ ಹಾವಳಿ ಸೇರಿದಂತೆ ಅನೇಕರು ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ