November 8, 2025

 

 

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಅಯೋಧ್ಯ ಬಲಿದಾನ ದಿವಸ ಪ್ರಯುಕ್ತ ಭಾನುವಾರ ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು.

ಶಿಬಿರವನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆ ಮತ್ತು ಮಲ್ಲೇಗೌಡ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ನೂರಾರು ಯುವಕರು ಹಾಗೂ ಸಮಾಜ ಸೇವಕರು ಉತ್ಸಾಹದಿಂದ ರಕ್ತದಾನದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಸಾಲುಮರದ ಮಹೇಶ್, ಜಿಲ್ಲಾ ಬಜರಂಗದಳ ಸಂಯೋಜಕ ಅಭಿ ಬಣಕಲ್, ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಸುದೇವ್ ಗುತ್ತಿ, ತಾಲೂಕು ಉಪಾಧ್ಯಕ್ಷ ಅಭಿ ಉಗ್ಗೆಹಳ್ಳಿ, ತಾಲೂಕು ಬಜರಂಗದಳ ಸಂಯೋಜಕ ಸಂತೋಷ್ ಶುಭನಗರ, ತಾಲೂಕು ಕಾರ್ಯದರ್ಶಿ ಪ್ರಶಾಂತ್ ಹಂಡುಗುಳು, ಜಿಲ್ಲಾ ಗೋರಕ್ಷ ಪ್ರಮುಖ ಅಜಿತ್ ಜೇನ್ ಬೆಲ್ ಸೇರಿದಂತೆ ಹಲವು ಸಂಘಟನಾ ಕಾರ್ಯಕರ್ತರು ಹಾಗೂ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂತ್ಯದಲ್ಲಿ ರಕ್ತದಾನಿಗಳ ಸೇವಾಭಾವವನ್ನು ಪ್ರಶಂಸಿಸಿ ಸಂಘಟಕರು ಧನ್ಯವಾದ ಸಲ್ಲಿಸಿದರು, ಪ್ರಶಂಸ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯರಾದ ಎಂ.ಆರ್.ಜಗದೀಶ್, ಡಾ.ರಾಮಚರಣ ಅಡ್ಯಂತಾಯ, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ