vidfyth

 

 

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ಭಾನುವಾರ ಈ ದುರ್ಘಟನೆ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ.

ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿಯನ್ನ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋ ವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾರೆ.

ವಿದ್ಯುತ್ ಶಾಕ್ ನಿಂದ ತೋಟದಲ್ಲೇ ಬಿದ್ದಿದ್ದ ಅಭಿಷೇಕ್ ನನ್ನು ಕೂಡಲೇ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು ಕೂಡ ತೀವ್ರವಾದಂತ ವಿದ್ಯುತ್ ಶಾಕ್ ನಿಂದ ಅಭಿಷೇಕ್ ಅಸುನೀಗಿದ್ದಾರೆ.

ಮೃತ ಅಭಿಷೇಕ್ ಅವರ ತಂದೆ ಈ ಬಗ್ಗೆ ದೂರು ನೀಡಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ