car bike

 

 

ಕಾರು-ಬೈಕ್ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಮೃತ್ಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಮಂಗಳವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಕಡೂರು ತಾಲ್ಲೂಕಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಮೃತರನ್ನು ಬೈಕ್ ನಲ್ಲಿದ್ದ ನಯನ (26) ಮತ್ತು ಮನು (27) ಎಂದು ಗುರುತಿಸಲಾಗಿದೆ. ಬೈಕಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್ ಸವಾರರು ಕಡೂರು ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗುತ್ತಿದ್ದರು ಎನ್ನಲಾಗಿದೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ