September 13, 2026
;
belagodu jayaramgowd2

 

 

ಮೂಡಿಗೆರೆ ತಾಲ್ಲೂಕು ಬಣಕಲ್ ಹೋಬಳಿ ಬೆಳಗೋಡು ಗ್ರಾಮದ ಹಿರಿಯ ಕಾಫಿ ಬೆಳೆಗಾರ, ಸಮಾಜಸೇವಕ ಬಿ.ಎ. ಜಯರಾಂಗೌಡ (84 ವರ್ಷ) ನಿಧನರಾಗಿದ್ದಾರೆ.

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೂಡಿಗೆರೆ ತಾಲ್ಲೂಕಿನ ಹಿರಿಯ ಕಾಫಿ ಬೆಳೆಗಾರರಲ್ಲಿ ಒಬ್ಬರಾಗಿದ್ದರು. ಹಲವು ಸಂಘಸಂಸ್ಥೆಗಳಲ್ಲಿ ಗುರುತಿಸಿಕೊಂಡು ಸಮಾಜಮುಖಿಯಾಗಿ ತೊಡಗಿಸಿಕೊಂಡಿದ್ದರು. ಬಿ.ಹೊಸಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಭಾರತಿಬೈಲ್ ಕಸ್ತೂರಿಬಾ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಬಣಕಲ್ ವಿದ್ಯಾಸಂಸ್ಥೆಯ ಹಾಲಿ ಅಧ್ಯಕ್ಷರಾಗಿದ್ದರು. ರಾಜಕೀಯವಾಗಿ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡು ಬಣಕಲ್ ಹೋಬಳಿ ಕಾಂಗ್ರೇಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ತಾರಾಮಣಿ, ಪುತ್ರರಾದ ಯಶ್ವಂತ್, ಜೈವಂತ್, ಸೊಸೆಯಂದಿರು, ಮೊಮ್ಮಕ್ಕಳು, ಅಪಾರ ಬಂಧುಗಳನ್ನು ಅಗಲಿದ್ದಾರೆ.

ಕೊಡುಗೈ ದಾನಿಯಾಗಿದ್ದ ಜಯರಾಂಗೌಡರು ಅನೇಕ ಸಮಾಜಮುಖಿ ಕಾರ್ಯಗಳಿಗೆ ದೇಣಿಗೆ ನೀಡುತ್ತಿದ್ದರು. ಸ್ನೇಹಜೀವಿಯಾಗಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಜಯರಾಂಗೌಡರ ನಿಧನಕ್ಕೆ ಬೆಳೆಗಾರರ ಸಂಘ ಸೇರಿದಂತೆ ವಿವಿಧ ಸಂಘಸಂಸ್ಥೆಗಳು ತಮ್ಮ ಸಂತಾಪ ಸೂಚಿಸಿವೆ.

ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ನಾಳೆ ಶುಕ್ರವಾರ ಸಂಜೆ 4 ಗಂಟೆಗೆ  ಸ್ವಗ್ರಾಮ ಬೆಳಗೋಡು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;