gaati1

 

 

ಕಾರು ಮತ್ತು ಗ್ಯಾಸ್ ಲಾರಿ ನಡುವೆ ಅಪಘಾತ ಸಂಭಿವಿಸಿ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.

ಇಂದು ಸಂಜೆ ಚಾರ್ಮಾಡಿ ಘಾಟ್ ಅಲೆಖಾನ್ ಜಲಪಾತದ ಬಳಿ ಪ್ರವಾಸಿಗರ ಕಾರು ಮತ್ತು ಗ್ಯಾಸ್ ಸಿಲಿಂಡರ್ ತುಂಬಿದ ಲಾರಿಯ ನಡುವೆ ಅಪಘಾತ ಸಂಭವಿಸಿದೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಇಂಡೇನ್ ಕಂಪನಿಯ ಗ್ಯಾಸ್ ಲಾರಿ ಮತ್ತು ಧರ್ಮಸ್ಥಳ ಕಡೆಗೆ ಚಲಿಸುತ್ತಿದ್ದ ಪ್ರವಾಸಿಗರ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರಿನ ಎಂಜಿನ್ ಭಾಗದಕ್ಕೆ ತೀವ್ರ ಹಾನಿಯಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟಾವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಅಪಘಾತದಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತವಾದ ವಾಹನಗಳು ರಸ್ತೆಮಧ್ಯೆದಲ್ಲಿಯೇ ಸಿಲುಕಿಕೊಂಡಿದ್ದರಿಂದ ಚಾರ್ಮಾಡಿ ಮತ್ತು ಕೊಟ್ಟಿಗೆಹಾರ ಕಡೆಯಿಂದ ರಸ್ತೆಯಲ್ಲಿ ಬಂದ ವಾಹನಗಳು ಅತ್ತಿಂದಿತ್ತ ಸಂಚರಿಸಲು ಆಗದೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ