madya pradesh cm

 

 

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ. ರಾಜ್ಯ ಮುಖ್ಯಮಂತ್ರಿ ಯಾರಾಗಲಿದ್ದಾರೆಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.

ಪಕ್ಷದ ನಾಯಕತ್ವವು ಉಜ್ಜಯನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್‌ ಯಾದವ್‌ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಮಾಡಿದೆ. ಹಿಂದಿನ ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದ ಸರ್ಕಾರದಲ್ಲಿ ಯಾದವ್‌ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದರು.

ಐವತ್ತೆಂಟು ವರ್ಷದ ಯಾದವ್‌ ಅವರು ಉಜ್ಜಯಿನಿಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಗದೀಶ್‌ ದಿಯೋರ ಮತ್ತು ರಾಜೇಶ್‌ ಶುಕ್ಲಾ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಆಯ್ಕೆಮಾಡಲಾಗಿದೆ. ಚುನಾವಣೆ ಸ್ಪರ್ಧಿಸಿದ್ದ ಸಂಸದರಲ್ಲಿ ಒಬ್ಬರಾಗಿದ್ದ ಮಾಜಿ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಸ್ಪೀಕರ್‌ ಸ್ಥಾನಕ್ಕೆ ಆಯ್ಕೆಮಾಡಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ