ajith amma

 

 

ಚಿಕ್ಕಮಗಳೂರು ಜಿಲ್ಲಾ ಜೆ.ಡಿ.ಎಸ್. ಅಧ್ಯಕ್ಷ, ಜಿಲ್ಲಾ ಅಮೇಚೂರ್ ಕಬ್ಬಡ್ಡಿ ಅಸೋಷಿಯೇಷನ್ ಅಧ್ಯಕ್ಷ ರಂಜನ್ ಅಜಿತ್ ಕುಮಾರ್ ಅವರ ಮಾತೃಶ್ರೀ, ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯೆ ಗೀತಾ ಅಜಿತ್ ಅವರ ಅತ್ತೆ ಶ್ರೀಮತಿ ಭಾಗೀರಥಿ ಕಲ್ಲಪ್ಪಗೌಡ(78  ವರ್ಷ) ಇಂದು ಮುಂಜಾನೆ ನಿಧನ ಹೊಂದಿದ್ದಾರೆ.

ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ 4.55ಕ್ಕೆ ಹಂಡುಗುಳಿಯ ಅವರ ತೋಟದ ಮನೆಯಲ್ಲಿ  ಕೊನೆಯುಸಿರೆಳೆದಿದ್ದಾರೆ.

ಮೂಡಿಗೆರೆ ಸಮೀಪದ ಹಂಡುಗುಳಿ ಗ್ರಾಮದ ಕಾಫಿಬೆಳೆಗಾರರಾಗಿದ್ದ ದಿವಂಗತ ಕಲ್ಲಪ್ಪಗೌಡರ ಧರ್ಮಪತ್ನಿಯಾಗಿದ್ದ ಭಾಗೀರಥಿಯವರು ರಂಜನ್ ಅಜಿತ್ ಕುಮಾರ್ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಅವರ ಅಂತ್ಯಸಂಸ್ಕಾರ ಶನಿವಾರ ಸಂಜೆ 4 ಗಂಟೆಗೆ ಹಂಡುಗುಳಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ