erappagowda

 

 

ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಈರಪ್ಪಗೌಡ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈರಪ್ಪಗೌಡರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮೂಡಿಗೆರೆ ಪಟ್ಟಣದ ಸುಶಾಂತ್ ನಗರದಲ್ಲಿ ವಾಸವಾಗಿದ್ದ ಅವರು ಶುಕ್ರವಾರ ರಾತ್ರಿ 9.40 ಕ್ಕೆ ಇಹಲೋಕ ತ್ಯಜಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಸುದೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಪಂಚನಹಳ್ಳಿ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ತಮ್ಮ ಸೇವೆ ಆರಂಭಿಸಿ ನಂತರ ಕಡೂರು, ಚಿಕ್ಕಮಗಳೂರು ನಗರ, ಬಣಕಲ್, ಬಾಳೂರು, ಗೋಣಿಬೀಡು ಠಾಣೆಗಳಲ್ಲಿ ಸೇವೆ ಸಲ್ಲಿಸಿ  ಮೂಡಿಗೆರೆ ಠಾಣೆಯಲ್ಲಿ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ (ಎ.ಎಸ್.ಐ) ಆಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ತಮ್ಮ ಸೇವಾ ಅವಧಿಯಲ್ಲಿ ಸಾರ್ವಜನಿಕರೊಂದಿಗೆ ಉತ್ತಮ ಒಡನಾಟ ಹೊಂದಿ ಪ್ರಶಂಸೆ ಗಳಿಸಿದ್ದರು.

ಈರಪ್ಪಗೌಡರು ನಿವೃತ್ತಿಯ ನಂತರ ತಮ್ಮ ಸ್ವಗ್ರಾಮ ಗೋಣಿಬೀಡು ಹೊಸಳ್ಳಿ ಗ್ರಾಮದಲ್ಲಿ ಕಾಫಿ ಕೃಷಿಯನ್ನು ನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಸುಶೀಲಾ, ಮಕ್ಕಳಾದ ಶ್ರೀದತ್ತಾ, ಶ್ರೀಲೇಖಾ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ. ಅವರ ಅಂತ್ಯ ಸಂಸ್ಕಾರ ಶನಿವಾರ ಸಂಜೆ 4 ಗಂಟೆಗೆ ಜಿ. ಹೊಸಳ್ಳಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ