pramya1

 

 

ಅಧಿಕ ಲಾಭ ನೀಡುವುದಾಗಿ ನಂಬಿಸಿ, 700 ಮಂದಿಯಿಂದ ಹಣ ಹೂಡಿಕೆ ಮಾಡಿಸಿಕೊಂಡು ಟೋಪಿ ಹಾಕಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೋಣನಕುಂಟೆಯ ಜಿ.ಎಸ್.ಪ್ರದೀಪ್ ಹಾಗೂ ನಾಗವಾರದ ವಸಂತ್ ಕುಮಾರ್ ಎಂದು ಗುರ್ತಿಸಲಾಗಿದೆ. ಪ್ರಕರಣದಲ್ಲಿ ಪ್ರದೀಪ್ ಪತ್ನಿ ಸೌಮ್ಯಾಳ ಪಾತ್ರದ ಬಗ್ಗೆಯೂ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಹೂಡಿಕೆ ಮಾಡಿದ ಹಣಕ್ಕೆ ಅಧಿಕ ಹಣ ನೀಡುವುದಾಗಿ ಆರೋಪಿಗಳು ಜಾಹೀರಾತು ನೀಡಿದ್ದರು. ಇದನ್ನೇ ನಂಬಿದ್ದ ಸಾರ್ವಜನಿಕರು ರೂ.25 ಕೋಟಿಯಷ್ಟು ಹೂಡಿಕೆ ಮಾಡಿದ್ದರು.

ಆರೋಪಿಗಳು, 2021ರಿಂದ ಜೆ.ಪಿ.ನಗರದ 9ನೇ ಹಂತದ ದೊಡ್ಡಕಲ್ಲಸಂದ್ರದ ನಾರಾಯಣನಗರದಲ್ಲಿ ‘ಪ್ರಮ್ಯಾ ಇಂಟರ್‌ನ್ಯಾಷನಲ್‌’ ಎಂಬ ಹೆಸರಿನಲ್ಲಿ ಅಕ್ರಮವಾಗಿ ಕಚೇರಿ ತೆರೆದಿದ್ದು, ಇದೇ ಹೆಸರಿನಲ್ಲಿ ವೆಬ್‌ಸೈಟ್ ಕೂಡ ನಡೆಸುತ್ತಿದ್ದರು. ಈ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರು ಹಣ ಹೂಡಿಕೆ ಮಾಡಿದರೆ ಶೇ 2.5ರಷ್ಟು ಪ್ರತಿ ತಿಂಗಳು ಲಾಭ ಬರುತ್ತದೆ ಎಂಬ ತಲೆಬರಹದಲ್ಲಿ ಆಯ್ದ ಹೂಡಿಕೆದಾರರಿಗೆ ಮಾತ್ರ ಹೂಡಿಕೆಗೆ ಅವಕಾಶ ಇರುತ್ತದೆ ಎಂದು ಹೇಳಿಕೊಂಡಿದ್ದರು.

ಪತಿ-ಪತ್ನಿಯಾಗಿರುವ ಪ್ರದೀಪ್ ಹಾಗೂ ಸೌಮ್ಯಾ ಇಬ್ಬರು ಮೊದಲು ಸಾಪ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಇಬ್ಬರು ತಮ್ಮದೇ ಆದ ಕಂಪನಿಯನ್ನು ತೆರೆದು, ವೇಗವಾಗಿ ಹಣ ಗಳಿಸಲು ನಿರ್ಧರಿಸಿದ್ದರು. ಇದರಂತೆ ಉದ್ಯೋಗ ತೊರೆದ ದಂಪತಿಗಳು ಪ್ರದೀಪ್ ಅವರ ಹೆಸರಿನಲ್ಲಿರುವ ಮೊದಲ ಅಕ್ಷರ ಪ್ರ ಹಾಗೂ ಸೌಮ್ಯ ಅವರ ಹೆಸರಿನ ಕೊನೆಯ ಮ್ಯಾ ಅಕ್ಷರಗಳನ್ನು ಬಳಸಿ ಪ್ರಮ್ಯಾ ಎಂದು ಹೆಸರಿಸಿಟ್ಟು, ಕಂಪನಿ ತೆರೆದಿದ್ದರು ಎಂದು ತಿಳಿದುಬಂದಿದೆ.

ಜಾಹೀರಾತು ನೋಡಿ ಅಧಿಕ ಬಡ್ಡಿ ಆಸೆಗೆ ಬಿದ್ದ ಜನರು ಸಾವಿರದಿಂದ ಲಕ್ಷಗಳವರೆಗೆ ಹಣ ಹೂಡಿಕೆ ಮಾಡಿದ್ರು. ಮೊದಲ ಆರು ತಿಂಗಳು ಕೊಟ್ಟ ಮಾತಿನಂತೆ ಮೂವತ್ತು ಪರ್ಸೆಂಟ್ ಹಣ ವಾಪಸ್ ಮಾಡಿದ್ರು. ಈ ವಿಚಾರ ಒಬ್ಬರಿಂದ ಒಬ್ಬರ ಕಿವಿಗೆ ಬಿದ್ದು, ಎರಡು ವರ್ಷದಲ್ಲಿ ಸುಮಾರು 700ಕ್ಕೂ ಹೆಚ್ಚು ಜನರು ಸುಮಾರು ಮೂವತ್ತು ಕೋಟಿಯಷ್ಟು ಹಣ ಹೂಡಿಕೆ ಮಾಡಿದ್ರು. ದುಡ್ಡು ಜಾಸ್ತಿ ಆಗ್ತಿದ್ದಂತೆ ಈ ದಂಪತಿ ನಾಟ್ ರಿಚಬಲ್ ಆಗೋಕೆ ಶುರುಮಾಡಿದ್ರು. ಈ ವಿಚಾರ ತಿಳಿದ ಸಿಸಿಬಿ ಅರ್ಥಿಕ ಅಪರಾಧದಳ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ತನಿಖೆಗೆ ಇಳಿದಿದ್ರು. ಪ್ರಾಥಮಿಕ ತನಿಖೆಯಲ್ಲಿ ಪ್ರದೀಪ್ ಮತ್ತು ಸೌಮ್ಯರ ಬ್ಯಾಂಕ್ ಡಿಟೇಲ್ ಕಲೆಕ್ಟ್ ಮಾಡಿದ ವೇಳೆ ಎರಡು ವರ್ಷದಲ್ಲಿ ಸುಮಾರು ಎಪ್ಪತ್ತು ಕೋಟಿ ಹಣದ ವ್ಯವಹಾರ ಮಾಡಿರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಪರಿಣಾಮ ಪ್ರಮ್ಯಾ ಇಂಟರ್ ನ್ಯಾಷನಲ್ ಮಾಲೀಕ ಪ್ರದೀಪ್ ಬಂಧನ ಮಾಡಿದ್ರು. ವಿಚಾರ ತಿಳಿದ ಪತ್ನಿ ಸೌಮ್ಯ ನಾಪತ್ತೆಯಾಗಿದ್ದಾರೆ.

ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಪನಿಯಲ್ಲಿ ಹೂಡಿಕೆ ಮಾಡಿರುವವರು ಸಿಸಿಬಿ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಹೇಳಿಕೆಗಳನ್ನು ದಾಖಲಿಸಿಕೊಳ್ಳುವಂತೆ ತಿಳಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ 2019 ರ ಅನಿಯಂತ್ರಿತ ಠೇವಣಿ ಯೋಜನೆಗಳ (BUDS) ನಿಷೇಧ ಕಾಯ್ದೆ ಮತ್ತು ವಂಚನೆ ಪ್ರಕರಣದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ