cocaine2

 

 

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಪ್ರಯಾಣಿಕರೊಬ್ಬರಿಂದ 20 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.

ನೈಜೀರಿಯಾದ ಪ್ರಜೆಯೊಬ್ಬ ತನ್ನ ಹೊಟ್ಟೆಯೊಳಗೆ ಕ್ಯಾಪ್ಸುಲ್‌ಗಳಲ್ಲಿ ಕೊಕೇನ್ ಅನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ್ದನು. ಕಸ್ಟಮ್ಸ್ ಅಧಿಕಾರಿಗಳು 99 ಕ್ಯಾಪ್ಸುಲ್‌ಗಳಲ್ಲಿ ಬಚ್ಚಿಟ್ಟಿದ್ದ 2 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕ ಇಥಿಯೋಪಿಯಾದ ಅಡಿಸ್ ಅಬಾಬಾದಿಂದ ಬೆಂಗಳೂರಿಗೆ ಆಗಮಿಸಿದ್ದನು.

5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಿಸಿ ಕೊಕೇನ್ 99 ಕ್ಯಾಪ್ಸುಲ್ ಗಳನ್ನು ಹೊರ ತೆಗೆಯಲಾಗಿದೆ. ಈ ವ್ಯಕ್ತಿ ಡಿಸೆಂಬರ್ 11ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಎನ್ನಲಾಗಿದೆ. ಆತನ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಆರೋಪ ಹೊರಿಸಲಾಗಿದೆ.

ಬಲ್ಲ ಮೂಲಗಳ ಪ್ರಕಾರ ಇದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಅತಿದೊಡ್ಡ ಕೊಕೇನ್ ಡ್ರಗ್ ಸರಬರಾಜು ಯತ್ನವಾಗಿದೆ. ನೈಜೀರಿಯಾ ಪ್ರಜೆ ವೈದ್ಯಕೀಯ ಚಿಕಿತ್ಸೆ ವೀಸಾದಲ್ಲಿ ಭಾರತಕ್ಕೆ ಬಂದಿರುವುದಾಗಿ ತಿಳಿದುಬಂದಿದೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾರಾಟ ಮಾಡಲು ಈ ಕೊಕೇನ್ ಕಳ್ಳಸಾಗಾಣಿಕೆ ಮಾಡಿ ತರುತ್ತಿದ್ದ ಎಂದು ಶಂಕಿಸಲಾಗಿದೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ