September 13, 2026
;
gas 1

 

 

ಸ್ನಾನಕ್ಕೆ ಹೋದಾಗ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್‌ ಲೀಕ್‌ ಆಗಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಂಗಳೂರಿನ ಅಶ್ವತ್ ನಗರದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ರಮ್ಯ(23) ಎಂದು ಗುರುತಿಸಲಾಗಿದೆ. ರಮ್ಯ ಅವರು ತಮ್ಮ ನಾಲ್ಕು ವರ್ಷದ ಮಗುವಿನೊಟ್ಟಿಗೆ ಸ್ನಾನ ಮಾಡಲು ಹೋಗಿದ್ದಾಗ ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿದೆ. ಗೀಸರ್‌ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

ಕುಟುಂಬಸ್ಥರು ತಕ್ಷಣ ರಮ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಮ್ಯ ಮೃತಪಟ್ಟಿದ್ದಾರೆ. ಗರ್ಭಿಣಿಯಾಗಿದ್ದ ರಮ್ಯ ಅವರ ಮಗುವೂ ಪ್ರಪಂಚ ನೋಡುವ ಮುನ್ನವೇ ಗರ್ಭದಲ್ಲೇ ಮೃತಪಟ್ಟಿದೆ. ಇತ್ತ ರಮ್ಯ ಅವರ ನಾಲ್ಕು ವರ್ಷದ ಮಗುವಿಗೂ ಚಿಕಿತ್ಸೆ ಮುಂದುವರಿದಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದೆ.

ಈ ಸಂಬಂಧ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;