ullala

 

 

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಚಿಕ್ಕಮಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ. ಚಿಕ್ಕಮಗಳೂರು ಅಯ್ಯಪ್ಪನಗರ ವಾಸಿಗಳಾದ ಸಲ್ಮಾನ್ (19) ಮತ್ತು ಮಹಮ್ಮದ್ ಬಶೀರ್ (25 ವರ್ಷ) ಮೃತಪಟ್ಟಿರುತ್ತಾರೆ.

ಮಂಗಳೂರು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲಗಳ ಪ್ರಕಾರ ಚಿಕ್ಕಮಗಳೂರು ಅಯ್ಯಪ್ಪನಗರದ ವಾಸಿಗಳಾದ ಇವರು ಕುಟುಂಬ ಸಮೇತ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು ನಂತರ ಇವರು ಮಂಗಳೂರು ಸಮ್ಮರ್ ಸ್ಯಾಂಡ್  ಬೀಚ್ ಗೆ ತೆರಳಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಶೀರ್, ಸಲ್ಮಾನ್ ಹಾಗೂ ಸೈಫ್ ಆಲಿ (27) ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು. ಈ ವೇಳೆ ಸ್ಥಳೀಯ ಈಜುಗಾರರು ಸಲ್ಮಾನ್ ಹಾಗೂ ಸೈಫುಲ್ಲಾ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇವರಲ್ಲಿ ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಸೈಫುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದರು.

ಬಶೀರ್ ನೀರಿನಲ್ಲಿ ಮುಳುಗಿ ನಾಪತ್ತೆ ಆಗಿದ್ದು ಸಂಜೆಯ ವೇಳೆಗೆ ಮೃತ ದೇಹವನ್ನು ಪತ್ತೆಹಚ್ಚಲಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಕುಟುಂಬದ ಸದಸ್ಯರನ್ನು ಕಳೆದುಕೊಂಡು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ