chirathe1

 

 

ಕಾಫಿತೋಟದ ಬೇಲಿಗೆ ಯಾರೋ ಹಾಕಿದ್ದ ಉರುಳಿಗೆ ಸಿಲುಕಿ ಸಂಕಟ ಪಡುತ್ತಿದ್ದ ಚಿರತೆಯೊಂದನ್ನು ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಕೆಂಜಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಂಜಿಗೆ ಗ್ರಾಮದ ಕಾಫಿ ತೋಟವೊಂದರ ಬೇಲಿಗೆ ಯಾರೋ ಕಾಡುಪ್ರಾಣಿಗಳ ಶಿಕಾರಿಗೆಂದು ಒಡ್ಡಿದ್ದ ಉರುಳಿಗೆ ಚಿರತೆ ಸಿಲುಕಿಕೊಂಡಿತ್ತು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಉರುಳಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಿಸಿ ಸೂಕ್ತ ಚಿಕಿತ್ಸೆ ನೀಡಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಈ ಚಿರತೆ ಅನೇಕ ದಿನಗಳಿಂದ ಕೆಂಜಿಗೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಚರಿಸುತ್ತಾ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿತ್ತು ಎಂದು ತಿಳಿದುಬಂದಿದೆ.

ಉರುಳಿನಿಂದ ರಕ್ಷಿಸಲ್ಪಟ್ಟಿರುವ ಈ ಚಿರತೆ ಅಂದಾಜು ನಾಲ್ಕು ವರ್ಷ ವಯಸ್ಸಿನ ಗಂಡು ಚಿರತೆಯಾಗಿದೆ.

https://youtu.be/C87zGguiItk?si=Qr1rv7-bKFnSwnZg

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ