IMG_20240128_160344

 

 

ಹೃದಯಾಘಾತದಿಂದ 25 ವರ್ಷದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ಸುಹಾಸ್ ಗೌಡ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಸುಹಾಸ್ ಮೂಡಿಗೆರೆ ತಾಲೂಕು, ಬಣಕಲ್ ಹೋಬಳಿ ಕೋಡದಿಣ್ಣೆ  ಗ್ರಾಮದ ಚಿಕ್ಕಮಗಳೂರು ನಿವಾಸಿಯಾಗಿರುವ ಸುರೇಶ ಗೌಡ ಮತ್ತು ಶ್ರೀಮತಿ ಮಮತ ದಂಪತಿಗಳ ಪುತ್ರ.

 

ಇಂಜಿನಿಯರ್ ಪದವಿ ಪಡೆದು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಹಾಸ್ ಗೌಡ ಇಂದು ಭಾನುವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ತಾನು ವಾಸವಾಗಿದ್ದ ಕೊಠಡಿಯಲ್ಲಿ ಏಕಾಏಕಿ ಎದೆನೋವು ಎಂದು ಹೇಳಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಸುಹಾಸ್ ಗೌಡ ಅವರ ಅಂತ್ಯಸಂಸ್ಕಾರ ಸೋಮವಾರ ಬೆಳಿಗ್ಗೆ ಕೋಡದಿಣ್ಣೆ ಗ್ರಾಮದಲ್ಲಿ ನೆರವೇರಲಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ