September 11, 2026
;
bharathi ravi

 

 

ಮೂಡಿಗೆರೆ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ರವೀಂದ್ರ ಸುಂಕಸಾಲೆ ಆಯ್ಕೆಯಾಗಿದ್ದಾರೆ. ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ರೂಪ ಪ್ರಶಾಂತ್ ಬಿದರಹಳ್ಳಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 14 ಸ್ಥಾನಗಳನ್ನು ಬಿ.ಜೆ.ಪಿ. ಬೆಂಬಲಿತ ಸದಸ್ಯರು ಗೆದ್ದುಕೊಂಡಿದ್ದರು. ಇದೀಗ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ  ಭಾರತಿ ರವೀಂದ್ರ ಅವರು ಮಾತನಾಡಿ ; ಮಹಿಳಾ ಸಹಕಾರ ಸಂಘವು ಮೂಡಿಗೆರೆಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಅನೇಕ ಮಂದಿ ಹಿರಿಯರು ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಸಂಘವು ಇನ್ನೂ ಬೆಳವಣಿಗೆಯ ಹಂತದಲ್ಲಿ ಇದ್ದು, ಮಹಿಳೆಯರಿಗೆ ಸಂಘದಿಂದ ಹಲವು ರೀತಿಯಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ.  ತಾಲ್ಲೂಕಿನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯತ್ವ ಪಡೆದು, ಆರ್ಥಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ನಂತರ ಮೂಡಿಗೆರೆ ಬಿ.ಜೆ.ಪಿ. ಕಛೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

 

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;