giri 11

 

 

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಡ್ಗಿಚ್ಚು ಹಬ್ಬಿದ್ದು ಬೆಂಕಿಯ ಕೆನ್ನಾಲಿಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

ಬಿಸಿಲಿನ ಝಳಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ ಪರಿಣಾಮ ನೂರಾರು ಎಕರೆ ಅಪರೂಪದ ಸಸ್ಯರಾಶಿ ಕೂಡ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನ ನಂದಿಸಲು ಹರಸಾಹಸ ಪಡ್ತಿದ್ದಾರೆ‌. ಅರಣ್ಯ ಇಲಾಖೆ, ಅಗ್ನಿ ಶಾಮಕ ಸಿಬ್ಬಂದಿಗಳ ಜೊತೆ ಸ್ಥಳಿಯರು ಕೂಡ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಆದರೆ, ಭಾರೀ ಗಾಳಿಗೆ ಬೆಂಕಿಯ ಜ್ವಾಲೆ ಹರಡುತ್ತಲೇ ಇದ್ದು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹೋರಾಡುತ್ತಿದ್ದಾರೆ.

ಮುಳ್ಳಯ್ಯನಗಿರಿ  ರಸ್ತೆ ಬದಿಯಲ್ಲೂ ಬೆಂಕಿ ಹತ್ತಿಕೊಂಡಿದ್ದು ಕೆಲ ಪ್ರವಾಸಿಗರು ಮುಳ್ಳಯ್ಯನಗಿರಿಯಿಂದ ಚಿಕ್ಕಮಗಳೂರಿಗೆ ಬರಲು ಸಾಧ್ಯವಾಗದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮುಳ್ಳಯ್ಯನಗಿರಿ   ಬೆಂಕಿಯಿಂದ ಪ್ರವಾಸಿಗರು ಸೇರಿದಂತೆ ಯಾರಿಗೂ ತೊಂದರೆಯಾಗಿಲ್ಲ.

ಬಿಸಿಲ ದಗೆಗೆ ಅರಣ್ಯ ಸಂಪೂರ್ಣ ಒಣಗಿ ನಿಂತಿರೋದ್ರಿಂದ ನೋಡನೋಡುತ್ತಿದ್ದಂತೆ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು ಪ್ರಾಣಿ ಪಕ್ಷಿಗಳ ಜೀವಕ್ಕೂ ಕುತ್ತು ಉಂಟಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ