muniyappa

 

 

ರಾಜ್ಯಾದ್ಯಂತ ಪಡಿತರ ಚೀಟಿಗೆ  ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ   ತಿಳಿಸಿದ್ದಾರೆ.

ವಿಧಾನಸಭೆಯ ಕಲಾಪದಲ್ಲಿಂದು ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಸದನದಲ್ಲಿ ಮಾತನಾಡಿದ ಶಾಸಕಿ ನಯನ ಮೋಟಮ್ಮ, ಬಿಪಿಎಲ್ ಕಾರ್ಡ್​ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿಂದ ತಲುಪುತ್ತಿಲ್ಲ. ಈ ಹಣ ಇಂತಹ ಫಲಾನುಭವಿಗಳಿಗೆ ಕೊಡುತ್ತಿದ್ದೀರಾ? ಇಲ್ಲವೇ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಮುನಿಯಪ್ಪ, ವಿಧಾಸಭೆ ಚುನಾವಣೆ ಬಂತು ಅಂತ ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್‌ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಲಾಗಿದೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ.

ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್‌ಗಳನ್ನು ವಿತರಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇದರ ಆದೇಶ ಹೊರಡಿಸಲಾಗಿದೆ. ಈ ಕೆಲಸ ಮುಗಿದ ನಂತರ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ