k t gatti1

 

 

ನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿ   ಇಂದು ನಿಧನರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿದ್ದ ಗಟ್ಟಿ ಅವರಿಗೆ 85 ವರ್ಷ ವಯಸ್ಸಾಗಿತ್ತು. ಉಡುಪಿಯ ಟಿ.ಎಂ.ಪೈ ಮಹಾವಿದ್ಯಾಲಯದಲ್ಲಿ ಅಧ್ಯಾಪಕರೂ ಆಗಿದ್ದ ಗಟ್ಟಿ, ಕಾದಂಬರಿ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದರು.

ಕರ್ನಾಟಕ ರಾಜ್ಯೋತ್ಸವ, ಅಕಾಡೆಮಿ ಪುರಸ್ಕಾರಗಳು ಸೇರಿದಂತೆ ಸಾಕಷ್ಟು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿದ್ದವು.

ಕೆ.ಟಿ. ಗಟ್ಟಿಯವರು 1938ರ ಜುಲೈ 22 ರಂದು ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದರು. ಕೆ.ಟಿ ಗಟ್ಟಿಯವರು  ದಕ್ಷಿಣ ಕನ್ನಡದಲ್ಲಿ ನೆಲಸಿದ್ದರು. 1957ರಿಂದಲೇ ಸಾಹಿತ್ಯ ಕೃಷಿ ಪ್ರಾರಂಭಿಸಿದ ಗಟ್ಟಿಯವರಿಗೆ ತಂದೆ ತಾಯಿಗಳೇ ಪ್ರೇರಣೆ. ವೃತ್ತಿಯಲ್ಲಿ ಕೃಷಿಕರಾದರೂ ಯಕ್ಷಗಾನ ಪ್ರಿಯರಾಗಿದ್ದರು.

ಕೆ.ಟಿ.ಗಟ್ಟಿ ಕನ್ನಡಕ್ಕೆ ವಿಶಿಷ್ಟ ಕೊಡುಗೆಯನ್ನು ಕೊಟ್ಟ ಮಹತ್ವದ ಲೇಖಕರು. ಕೆ.ಟಿ ಗಟ್ಟಿಯವರು ಕಾಸರಗೋಡಿನ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿದರು. ಭೋದನೆ ಜೊತೆ ಜೊತೆಗೆಯೇ ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ ಸ್ನಾತಕೋತ್ತರ ಪದವಿ ಪಡೆದರು. ನಂತರ 1968ರಲ್ಲಿ ಮಣಿಪಾಲದ ಎಂ.ಐ.ಟಿ. ಸಂಸ್ಥೆ ಸೇರಿ ಆರು ವರ್ಷಗಳ ಕಾಲ ಇಂಗ್ಲಿಷ್‌ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದರ ಜೊತೆಗೆ ಒಂದು ವರ್ಷ ಉಡುಪಿಯ ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲೂ ಅಧ್ಯಾಪಕರಾಗಿ ಸೇವೆಸಲ್ಲಿಸಿದರು. ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ನಿಯುಕ್ತರಾಗಿ ಇಥಿಯೋಪಿಯಾದಲ್ಲಿ ಕಾರ್ಯನಿರ್ವಹಿಸಿ 1982ರಲ್ಲಿ ಸ್ವದೇಶಕ್ಕೆ ಮರಳಿದರು.

ಪೂರ್ಣಾವಧಿ ಲೇಖಕರಾಗಿ ಬದುಕಲು ನಿರ್ಧರಿಸಿ ಉಜಿರೆಯ ಬಳಿ ಜಮೀನು ಖರೀದಿಸಿ ‘ವನಸಿರಿ’ಯಲ್ಲಿ ಕೃಷಿ, ಸಾಹಿತ್ಯ ಕೃಷಿ ಎರಡರಲ್ಲೂ ತೊಡಗಿಸಿಕೊಂಡರು. ಕೆ ಟಿ ಗಟ್ಟಿಯವರ ಮೊದಲ ಕಾದಂಬರಿ ‘ಶಬ್ದಗಳು’ ಧಾರಾವಾಹಿಯಾಗಿ 1976ರಲ್ಲಿ ಸುಧಾ ವಾರ ಪತ್ರಿಕೆಯಲ್ಲಿ ಪ್ರಕಟವಾಗಿತ್ತು.

ಕಾರ್ಮುಗಿಲು, ಪುನರಪಿ ಜನನಂ, ಬಿಸಿಲುಗುದುರೆ, ಕಾಮರೂಪಿ, ಸನ್ನಿವೇಶ, ಉರಿ, ಶಬ್ದಗಳು, ನಿರಂತರ, ಸ್ವರ್ಣ ಮೃಗ, ಅಬ್ರಾಹ್ಮಣ, ಪರುಷ, ಅಶ್ರುತ ಗಾನ, ಅರಗಿನ ಅರಮನೆ, ಶಿಲಾ ತಪಸ್ವಿ, ಸನ್ನಿವೇಶ, ಗ್ಲಾನಿ, ಪರಮಾರ್ಥ, ಪರಿಧಿ, ಪೂಜಾರಿ, ಮನೆ, ಕೆಂಪು ಕಳವೆ, ಕರ್ಮಣ್ಯೇವಾಧಿಕಾರಸ್ತೆ, ಭೂಮಿಗೀತೆ, ಕೂಪ, ಅಪೂರ್ಣ, ಸುಖಾಂತ, ಸಾಫಲ್ಯ, ಕಾಮಯಜ್ಞ, ಅವಿಭಕ್ತರು, ರಸಾತಳ, ನವೆಂಬರ್ 10, ಯುಗಾಂತರ, ಮಿತಿ, ರಾಗಲಹರಿ, ಮೃತ್ಯೋರ್ಮಾ ಅಮೃತಂ ಗಮಯ, ಏಳು ಮಲ್ಲಿಗೆ ತೂಕದ ಹುಡುಗಿ, ಇತಿಹಾಸದ ಮೊಗಸಾಲೆಯಲ್ಲಿ, ಅನಂತರ, ಅಂತರಂಗದ ಅತಿಥಿ, ಯುದ್ಧ ಹೀಗೆ ಐವತ್ತಕ್ಕೂ ಮಿಗಿಲಾದ ಕಾದಂಬರಿಗಳನ್ನು ರಚಿಸಿದ್ದಾರೆ.

ಜೊತೆಗೆ ವೈಚಾರಿಕ ಲೇಖನಗಳು, ಅನೇಕ ನಾಟಕಗಳನ್ನು ಮತ್ತು ರಾಜ್ಯದ ವಿವಿಧ ಪತ್ರಿಕೆಗಳಿಗೆ ಲೇಖನ ಸರಣಿಗಳನ್ನು ಬರೆದಿದ್ದಾರೆ.

ಅವರಿಗೆ ಪತ್ನಿ ಯಶೋದಾ, ಪುತ್ರ ಸತ್ಯಜಿತ್​, ಪುತ್ರಿಯರಾದ ಪ್ರಿಯದರ್ಶಿನಿ, ಜಿತ್​ ಪ್ರಭಾ ಇದ್ದಾರೆ. ಅವರ ದೇಹವನ್ನು ದಾನಮಾಡಲು ಅವರ ಕುಟುಂಬ ನಿರ್ಧರಿಸಿದ್ದು ಮಂಗಳೂರಿನ ಕೆಎಂಸಿ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ