ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಸೃಜನಶೀಲ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ನೆರವೇರಿತು.
ಸೃಜನಶೀಲ ಕಾರ್ಯಕ್ರಮದಲ್ಲಿ ಮೂಡಿಗೆರೆ ಕಸಬಾ ವಲಯದ ಅನ್ನಪೂರ್ಣೇಶ್ವರಿ ಜ್ಞಾನ ವಿಕಾಸ ಕೇಂದ್ರದ 5 ಜನ ಮಹಿಳೆಯರಿಗೆ ವಿಶೇಷವಾಗಿ ಆಟೋ ತರಬೇತಿಯನ್ನು ಪಡೆದಿರುತ್ತಾರೆ.
ವಲಯದ ಮೇಲ್ವಿಚಾರಕರಾದ ದಾಮೋದರ್ ಅವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದಲು ಮುಂದಿನ ದಿನಗಳಲ್ಲಿ ಆಟೋ ಖರೀದಿ ಮಾಡುವುದಾಗಿ ಸದಸ್ಯರು ಮುಂದೆ ಬಂದಿದ್ದಾರೆ. ಮಹಿಳೆಯರು ಎಲ್ಲಾ ರಂಗದಲ್ಲಿಯೂ ಪುರುಷರಿಗೆ ಸರಿಸಮಾನಾಗಿ ಸಾಧನೆ ತೋರುತ್ತಿದ್ದಾರೆ. ಮಹಿಳೆಯರಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನೇಕ ತರಬೇತಿಗಳನ್ನು ಮತ್ತು ಸಹಾಯಧನವನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಇದನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಆಟೋ ತರಬೇತಿದಾರರಾದ ನಾಗರಾಜ್ ಪೂಜಾರಿ, ಕೇಂದ್ರದ ಅಧ್ಯಕ್ಷರಾದ ಜಯಲಕ್ಷ್ಮಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಭಾರತಿ, ಸೇವಾ ಪ್ರತಿನಿಧಿ ಪಾರ್ವತಿ, ಕೇಂದ್ರದ ಎಲ್ಲಾ ಸದಸ್ಯರು ಹಾಗೂ ಆಟೋ ತರಬೇತಿ ಪಡೆದುಕೊಂಡು ಸದಸ್ಯರು ಉಪಸ್ಥಿತರಿದ್ದರು



