ganja

 

 

ಕಾಫಿ ತೋಟವೊಂದರಲ್ಲಿ ಕಾಫಿಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದ ಆರೋಪದ ಮೇಲೆ ತೋಟದ ಮಾಲಿಕನನ್ನು ಸಿಇಎನ್ ಪೊಲೀಸರು ಬಂಧಿಸಿರುವ ಘಟನೆ ಬುಧವಾರ ಸಂಜೆ ಚಿಕ್ಕಮಗಳೂರು ತಾಲೂಕಿನ ಕೆಳಹೊಲಗದ್ದೆ ಗ್ರಾಮದಲ್ಲಿ ನಡೆದಿದೆ.

ಬಂಧಿತ ಅರೋಪಿಯನ್ನು ಕೆಳಹೊಲಗದ್ದೆ ಗ್ರಾಮದ ನಿವಾಸಿ ರಾಜೇಂದ್ರ ಎಂದು ಗುರುತಿಸಲಾಗಿದೆ.

ಆರೋಪಿ ರಾಜೇಂದ್ರ ಕಾಫಿ‌ತೋಟದ ಕಾಫಿ ಗಿಡಗಳ ಮಧ್ಯೆ ಕೆಲ ತಿಂಗಳುಗಳ ಹಿಂದೆ ಗಾಂಜಾ ಗಿಡಗಳನ್ನು‌ ಬೆಳೆದಿದ್ದ. ಬುಧವಾರ ಸಂಜೆ ಖಚಿತ ಮಾಹಿತಿ ಮೇರೆಗೆ ಸಿಇಎನ್ ಪೊಲೀಸರು ಕಾಫಿ ತೋಟದ ಮೇಲೆ ದಿಡೀರ್ ದಾಳಿ ನಡೆಸಿದಾಗ ತೋಟದಲ್ಲಿ‌ ಗಾಂಜಾ ಗಿಡಗಳು ಪತ್ತೆಯಾಗಿವೆ. ದಾಳಿ ವೇಳೆ  ಹಸಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ