bus 1

 

 

ರಾಜ್ಯದಲ್ಲಿಯೇ ಅತಿ ಕಡಿದಾದ ತಿರುವುಗಳನ್ನು ಹೊಂದಿರುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಾರಿಗೆ ಬಸ್ ಒಂದು ಬ್ರೇಕ್ ಫೇಲ್ ಆಗಿ, ಚಾಲಕನ‌ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.

ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ಇಂದು ಬೆಳಿಗ್ಗೆ ಚಾರ್ಮಾಡಿ 6ನೇ ತಿರುವಿನಲ್ಲಿ ಇದ್ದಕ್ಕಿದಂತೆ ಬ್ರೇಕ್ ಫೇಲ್ ಆಗಿದೆ.

ಬ್ರೇಕ್ ಫೇಲ್ ಅಗ್ತಿದ್ದಂತೆ ಬಸ್ ನಲ್ಲಿದ್ದರಿಗೆ ಚಾಲಕ ಮಾಹಿತಿ ನೀಡಿದ್ದು, ಎಲ್ಲರೂ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಬಸ್ಸು ಓಲಾಡುತ್ತಿರುವುದನ್ನು ಕಂಡು ಭಯಗೊಂಡು ಬೊಬ್ಬೆ ಹೊಡೆಯಲು ಶುರು ಮಾಡಿದರು.

ನಂತರ ಸಮಯಪ್ರಜ್ಞೆ ತೋರಿದ ಚಾಲಕ ರಸ್ತೆ ಬದಿಯ ಮೋರಿಯೊಂದಕ್ಕೆ ಡಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲಿಸಿದ್ದಾರೆ. ಬಸ್ ಸುರಕ್ಷಿತವಾಗಿ ನಿಂತಿದ್ದು ಬಸ್ ನಲ್ಲಿದ್ದವರು ಎಲ್ಲರೂ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬಸ್ ಚಾಲಕ ಸಂತೋಷ್ ತೋರಿದ ಸಮಯಪ್ರಜ್ಞೆಗೆ ಪ್ರಯಾಣಿಕರು ಮತ್ತು ಸಾರ್ವಜನಿಕರು ಪ್ರಶಂಸೆ‌ ವ್ಯಕ್ತಪಡಿಸಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ