jci lady

 

 

ಮೂಡಿಗೆರೆ ಮಹಿಳಾ ಜೇಸಿಐ ಮಹಿಳಾ ಘಟಕದ ವತಿಯಿಂದ ಪಟ್ಟಣದ ಜೇಸಿ ಭವನದಲ್ಲಿ ಅಂತರಾಷ್ಟ್ರೀ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಡಿ ಜೇಸಿ ರಾಷ್ಟ್ರೀಯ ಸಂಯೋಜಕಿ ಯಶಸ್ವಿನಿ ಅವರು ಮಾತನಾಡಿ ; ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಆತ್ಮವಿಶ್ವಾಸ ಮತ್ತು ಸ್ವಾಭಿಮಾನದಿಂದ ತಮ್ಮ ಸಾಮಾರ್ಥ್ಯ ಮತ್ತು ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ. ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಬದುಕಿನಲ್ಲಿ ಸಾಧನೆ ತೋರಬೇಕು ಎಂದರು.

ಜೇಸಿ ವಲಯ ಉಪಾಧ್ಯಕ್ಷೆ ವಿದ್ಯಾರಾಜು ಅವರು ಮಾತನಾಡಿ ; ಜೇಸಿಐ ಸಂಸ್ಥೆಯು ಮಹಿಳೆಯರಿಗೆ ವಿಶೇಷ ಅವಕಾಶದ ವೇದಿಕೆಯಾಗಿದೆ. ಲೇಡಿ ಜೇಸಿ ಘಟಕಗಳಲ್ಲಿ ಸಾವಿರಾರು ಮಹಿಳೆಯರು ತಮ್ಮನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಮಹಿಳೆಯರು ಜೇಸಿ ಸಂಸ್ಥೆಗೆ ಸೇರುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಮತ್ತು ಪ್ರತಿಭೆಯನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಏರಿಸಿಕೊಳ್ಳಬಹುದು ಎಂದರು.

ಲೇಡಿ ಜೇಸಿ ವಲಯ ಸಂಯೋಜಕಿ ರೂಪಾ ಗೋಪಾಲಕೃಷ್ಣ, ಯೂರೋಕಿಡ್ಸ್ ಮುಖ್ಯಸ್ಥರಾದ ರಶ್ಮಿ ಸುಮನ್ , ಜೇಸಿಐ ಮೂಡಿಗೆರೆ ಘಟಕದ ಅಧ್ಯಕ್ಷ ಸುಪ್ರೀತ್ ಕಾರಬೈಲ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತ ಮಹಿಳೆ ಗೌಡಹಳ್ಳಿ ಗ್ರಾಮದ  ಪೂರ್ಣಿಮಾ ಹರೀಶ್, ಆಶಾ ಕಾರ್ಯಕರ್ತೆಯಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಮಾಕೋನಹಳ್ಳಿಯ ಮೈನಾ ಹಾಗೂ ಕ್ರೀಡೆಯಲ್ಲಿ ರಾಷ್ಟ್ರಮಟ್ಟದ ಸಾಧನೆ ಮಾಡಿದ ಮೂಡಿಗೆರೆ ತಾಲ್ಲೂಕು ಬಕ್ಕಿ ಗ್ರಾಮದ ಬಿ.ಎಸ್. ಹೃಥ್ವರಿ ಥೋಷ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಜೆಸಿ ವಿಭಾಗದ ಅಧ್ಯಕ್ಷರಾದ ದಿವ್ಯ ಸುಪ್ರೀತ್ ಅವರು ವಹಿಸಿದ್ದರು.

ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆಸಿದಂತ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ   ಮಹಿಳಾ ಜೇಸಿ ನಿಕಟ ಪೂರ್ವ ಅಧ್ಯಕ್ಷರಾದ ಕವಿತಾ ಸಂತೋಷ್, ಕಾರ್ಯದರ್ಶಿ ಶೃತಿ ದೀಕ್ಷಿತ್, ಕಾರ್ಯಕ್ರಮದ ನಿರ್ದೇಶಕಿ ನಿಶ್ಚಿತ ಯತೀಶ್ ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ