kuri 1

 

 

ರಸ್ತೆಬದಿಯಲ್ಲಿ ಮೇಯುತ್ತಿದ್ದ ಕುರಿಗಳನ್ನು ರಾಜಾರೋಷವಾಗಿ ಕಾರಿಗೆ ತುಂಬಿಸಿ ಕದ್ದೊಯ್ಯುತ್ತಿದ್ದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಮೂಡಿಗೆರೆ ತಾಲ್ಲೂಕಿನ  ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲ ಈ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಕುರಿಗಳನ್ನು ಕಳ್ಳತನ ಮಾಡಿ ಅಪರಿಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಭದ್ರಾವತಿಯ ಜಬೀವುಲ್ಲಾ ಮತ್ತು  ಕುಟುಂಬದವರು ಕಾರಲ್ಲಿ ಸಂಚರಿಸುವಾಗ ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಸಮೀಪ ಮೇಯುತ್ತಿದ್ದ ಕುರಿಮಂದೆಯನ್ನು ಕಂಡು ಕುರಿಗಳನ್ನು ಕಳ್ಳತನ ಮಾಡುವ ಉದ್ದೇಶದಿಂದ ಕಾರು ನಿಲ್ಲಿಸಿ ಐದು ಕುರಿಗಳನ್ನು ಹಿಡಿದು ಕಾರಿಗೆ ತುಂಬಿಸಿದ್ದಾರೆ.

ಇದನ್ನು ಗಮನಿಸಿದ ಸ್ಥಳೀಯರು ಕುರಿಗಳ ಮಾಲೀಕ  ಮೊಹಮ್ಮದ್  ಅವರಿಗೆ  ಮಾಹಿತಿ ನೀಡಿದ್ದು ವಿಷಯ ತಿಳಿದು ಸ್ಥಳೀಯರು ಜಮಾಯಿಸಿ  ಆರೋಪಿ ಜಬೀವುಲ್ಲಾ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಸಬ್ ಇನ್ ಸ್ಪೆಕ್ಟರ್ ಕೌಶಿಕ್, ಪೊಲೀಸ್ ಸಿಬ್ಬಂದಿ ಜಗದೀಶ್ ಮತ್ತಿತರ ಸಿಬ್ಬಂದಿಗಳು ಭೇಟಿ ನೀಡಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಚಿನ್ನದ ಉಂಗುರಗಳು ವಶಕ್ಕೆ ; ಚಿಕ್ಕಮಗಳೂರು ಸಮೀಪದ ವಸ್ತಾರೆ ಚೆಕ್ ಪೋಸ್ಟ್ ನಲ್ಲಿ ಘಟನೆ


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ