kejriwal1

 

 

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.) ತಂಡವು ಬಂಧಿಸಿದೆ.

ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್   ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ಡೆಲ್ಲಿ ಹೈಕೋರ್ಟ್​   ನಿರಾಕರಿಸಿದ ಹಿನ್ನೆಲೆಯಲ್ಲಿ ಸಂಜೆ ವೇಳೆ ಸಿಎಂ ನಿವಾಸಕ್ಕೆ ತೆರಳಿದ ಇಡಿ ಅಧಿಕಾರಿಗಳು ಅರವಿಂದ ಕೇಜ್ರಿವಾಲ್ ಅವರನ್ನು ಅರೆಸ್ಟ್​ ಮಾಡಿದ್ದಾರೆ.

ಇಡಿ ಅಧಿಕಾರಿಗಳು ದೊಡ್ಡ ಮಟ್ಟದ ಪೊಲೀಸ್​ ಭದ್ರತೆಯೊಂದಿಗೆ ಸಿಎಂ ನಿವಾಸಕ್ಕೆ ತೆರಳಿ ಸತತವಾಗಿ ಎರಡು ಗಂಟೆಗಳ ಕಾಲ ಶೋಧನೆ ಮತ್ತು  ವಿಚಾರಣೆ ನಡೆಸಿ  ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಎಂ ನಿವಾಸಕ್ಕೆ ತೆರಳಿದ್ದ 12ಕ್ಕೂ ಅಧಿಕ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಹಲವಾರು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಕೇಜ್ರಿವಾಲ್ ಅವರ ಮನೆಗೆ ಹೋಗುವ ರಸ್ತೆಗಳನ್ನು ದೆಹಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು.

ಕೇಜ್ರಿವಾಲ್ ಅವರ ಮನೆಗೆ ಅಧಿಕಾರಿಗಳು ತೆರಳುತ್ತಿದ್ದಂತೆ ಆಪ್​ ಕಾರ್ಯಕರ್ತರು ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ನಾಯಕರು ಮನೆಯ ಸುತ್ತ ಜಮಾಯಿಸಿ ಘೋಷಣೆಗಳನ್ನು ಕೂಗಿದರು.

ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ   ಇ.ಡಿ ಅಧಿಕಾರಿಗಳ ಬಂಧನದಿಂದ ರಕ್ಷಣೆ ಕೋರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್‌   ತಿರಸ್ಕರಿಸಿತ್ತು.

“ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರವಿಂದ್‌ ಕೇಜ್ರಿವಾಲ್‌ ಅವರಿಗೆ 9 ಬಾರಿ ಸಮನ್ಸ್‌ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಮಂಧ್ಯಂತರ ರಕ್ಷಣೆ ನೀಡಲು ಆಗುವುದಿಲ್ಲ” ಎಂದು ದೆಹಲಿ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಅವರಿಂದ್‌ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇದುವರೆಗೆ 9 ಬಾರಿ ನೋಟಿಸ್‌ ಜಾರಿಗೊಳಿಸಿದ್ದಾರೆ. ಆದರೂ, ಕೇಜ್ರಿವಾಲ್‌ ಅವರು ಒಮ್ಮೆಯೂ ವಿಚಾರಣೆಗೆ ಹಾಜರಾಗಿಲ್ಲ.

ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್‌ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಏನಿದು ಅಬಕಾರಿ ಹಗರಣ ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದ್ದು, ದೆಹಲಿ ಸರ್ಕಾರದ ಸಚಿವರು 100 ಕೋಟಿಗೂ ಅಧಿಕ ಕಿಕ್ ಬ್ಯಾಕ್ ಪಡೆದಿದ್ದಾರೆ  ಎಂಬ ಆರೋಪ ಮಾಡಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರುಗಳನ್ನು ಬಂಧಿಸಲಾಗಿದೆ. ಅಲ್ಲದೇ ಇ.ಡಿ ಅಧಿಕಾರಿಗಳು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪುತ್ರಿ ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ