benki 1

 

 

ಆಕಸ್ಮಿಕವಾಗಿ ಹುಲ್ಲಿಗೆ ಹತ್ತಿದ ಬೆಂಕಿ ಅಕ್ಕಪಕ್ಕೆಲ್ಲ ಆವರಿಸಿ ನಾಲ್ಕು ಕಾರುಗಳು ಭಸ್ಮವಾಗಿರು ಘಟನೆ ಚಿಕ್ಕಮಗಳೂರು ನಗರದ ಉಪ್ಪಳ್ಳಿಯ ಬದ್ರಿಯಾ ಗ್ಯಾರೇಜ್ ನಲ್ಲಿ ಭಾನುವಾರ  ನಡೆದಿದ್ದು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಗ್ಯಾರೇಜ್ ಪಕ್ಕದಲ್ಲಿ ಸಾಕಷ್ಟು ಹುಲ್ಲು ಬೆಳೆದಿತ್ತು. ಬೇಸಿಗೆಯಲ್ಲಿ ಆ ಹುಲ್ಲು ಒಣಗಿ ನಿಂತಿತ್ತು. ಆಕಸ್ಮಿಕವಾಗಿ ಹುಲ್ಲಿಗೆ ಬಿದ್ದ ಬೆಂಕಿ ಉರಿಯಾಗಿ ನಾಲ್ಕು ಕಾರುಗಳಿಗೆ ಅಗ್ನಿ ಸ್ಪರ್ಷವಾಗಿದೆ. ಒಂದೇ ಕಡೆ ನಿಲ್ಲಿಸಿದ್ದ ನಾಲ್ಕು ಕಾರುಗಳು ಬೆಂಕಿಗೆ ಆಹುತಿಯಾಗಿವೆ.

ನಗರದ ಉಪ್ಪಳ್ಳಿ ಸಮೀಪದ ಬದ್ರಿಯ ಗ್ಯಾರೇಜ್ ನಲ್ಲಿ ರಿಪೇರಿಗೆಂದು ಬಿಟ್ಟಿದ್ದ ನಾಲ್ಕು ಕಾರುಗಳು ಏಕಾಏಕಿ ತಗುಲಿದ ಬೆಂಕಿ ಯಿಂದ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಆವರಿಸುವ ಮೊದಲೇ ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ. ಇಷ್ಟೇ ಅಲ್ಲದೇ ಪಕ್ಕದಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿನ ಟೈರ್ ಸಹಾ ಬೆಂಕಿ ತಗುಲಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ