karajila

 

 

ಲೋಕಸಭಾ ಚುನಾವಣೆಯಲ್ಲಿ  ಕರ್ನಾಟಕದಿಂದ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು  ಬಿಡುಗಡೆ ಮಾಡಲಾಗಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ  ಅವರಿಗೆ ಟಿಕೆಟ್‌ ನೀಡಲಾಗಿದೆ.

ಇಲ್ಲಿ ಹಾಲಿ ಸಂಸದ ಮತ್ತು ಕೇಂದ್ರ ಸಚಿವರಾಗಿರುವ ನಾರಾಯಣ ಸ್ವಾಮಿ  ಅವರಿಗೆ ಟಿಕೆಟ್‌ ಕೈತಪ್ಪಿದೆ.

ಬಿ.ಜೆ.ಪಿ. ಈ ಹಿಂದೆ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಎರಡು ಪಟ್ಟಿಯಲ್ಲಿ ಚಿತ್ರದುರ್ಗವನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಢಿತ್ತು.
ಇದೀಗ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡುವ ಮೂಲಕ ರಾಜ್ಯದ 25 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ. ಮೂರು ಕ್ಷೇತ್ರಗಳನ್ನು ಮೈತ್ರಿ ಪಕ್ಷ ಬಿ.ಜೆ.ಪಿ.ಗೆ ಬಿಟ್ಟುಕೊಟ್ಟಿದೆ.
ಚಿತ್ರದುರ್ಗದಲ್ಲಿ ಮಾಜಿ ಸಚಿವ ಜನಾರ್ದನ ಸ್ವಾಮಿ ಹಾಗೂ ಎಂ.ಸಿ. ರಘು ಚಂದನ್‌ ನಡುವೆ ತೀವ್ರ ಪೈಪೋಟಿ ಇತ್ತು. ಈ ನಡುವೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರ ಹೆಸರು ಸಹ ಕೇಳಿಬಂದಿತ್ತು. ಅಲ್ಲದೆ, ಮಾದಾರಾ ಚನ್ನಯ ಶ್ರೀಗಳು ಸಹ ಇಲ್ಲಿ ಬಿಜೆಪಿಯ ಟಿಕೆಟ್‌ ರೇಸ್‌ನಲ್ಲಿದ್ದರು.
ಎಸ್ಸಿ ಮೀಸಲು ಕ್ಷೇತ್ರವಾಗಿರುವ ಚಿತ್ರದುರ್ಗದಲ್ಲಿ ಅಂತಿಮವಾಗಿ ಅಳೆದು ತೂಗಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಿದೆ.
ಇಲ್ಲಿ ಕಾಂಗ್ರೇಸ್ ನಿಂದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರನ್ನು ಕಣಕ್ಕಿಳಿಸಲಾಗಿದೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ