prajwal1

 

 

ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಗುರುವಾರ ನಾಮಪತ್ರ ಸಲ್ಲಿಸಿದರು.

ಸಂಸದ, ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಹಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ, ಹರದನಹಳ್ಳಿಯ ಶಿವನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಹಾಸನದಲ್ಲಿ ಸಾವಿರಾರು ಕಾರ್ಯಕರ್ತರು, ಹಿತೈಷಿಗಳೊಂದಿಗೆ ಬೃಹತ್ ರೋಡ್ ಶೋ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ನಾಮಪತ್ರ ಸಲ್ಲಿಸಿದರು.

ಪ್ರಜ್ವಲ್ ರೇವಣ್ಣ

ನಾಮಪತ್ರ ಸಲ್ಲಿಸುವಾಗ ಪ್ರಜ್ವಲ್ ರೇವಣ್ಣ ಅವರಿಗೆ ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್, ಅರಕಲಗೋಡು ಶಾಸಕ ಎ.ಮಂಜು, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಸಕಲೇಶಪುರ ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್. ಡಿ. ರೇವಣ್ಣ,  ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ, ಭವಾನಿ ರೇವಣ್ಣ,   ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ, ಬೇಲೂರು ಶಾಸಕ ಎಚ್.ಕೆ. ಸುರೇಶ್, ಹಾಸನ ಶಾಸಕ ಸ್ವರೂಪ್ ಪ್ರಕಾಶ್, ಮಾಜಿ ಶಾಸಕ ವೈ.ಎಸ್.ವಿ ದತ್ತ, ಬೆಳ್ಳಿ ಪ್ರಕಾಶ್, ಲಿಂಗೇಶ್ ಹಾಗೂ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಪ್ರಮುಖರು, ಸಾವಿರಾರು ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

ಪ್ರೀತಂಗೌಡ ಗೈರು

ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಜ್ವಲ್ ರೇವಣ್ಣ ಅವರ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಮತ್ತು ಆ ನಂತರ ನಡೆದ ಸಮನ್ವಯ ಸಭೆಯಲ್ಲಿ ಹಾಸನ ಮಾಜಿ ಶಾಸಕ ಬಿ.ಜೆ.ಪಿ. ಯುವ ಮುಖಂಡರ ಪ್ರೀತಂಗೌಡ ಅವರ  ಗೈರು ಹಾಜರಿ ಎದ್ದು ಕಂಡಿತು. ಜೆಡಿಎಸ್ ನೊಂದಿನ ಮೈತ್ರಿಗೆ ಮೊದಲಿನಿಂದಲೂ ತಮ್ಮ ಆಕ್ಷೇಪ ವ್ಯಕ್ತಪಡಿಸುತ್ತಾ ಬಂದಿರುವ ಪ್ರೀತಂಗೌಡ ಇಂದಿನ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಗೈರು ಹಾಜರಾಗುವ ಮೂಲಕ ಬಹಿರಂಗವಾಗಿಯೇ ತಮ್ಮ ಅಸಮದಾನ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ