ganga 3_page-0001 (1)

 

 

ಕಾಫಿತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯ ಗುಲ್ಲನ್ ಪೇಟೆ ಎಂಬಲ್ಲಿ ಈ ಘಟನೆ ನಡೆದಿದೆ.

ಗುಲ್ಲನ್ ಪೇಟೆ ನಿವಾಸಿ ಕಾಫಿ ಬೆಳೆಗಾರ ಅಬ್ದುಲ್ ಬಶೀರ್ ಎಂಬಾತ ತನ್ನ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಗಾಂಜಾ ಗಿಡಗಳನ್ನು ಹುಲುಸಾಗಿ ಬೆಳೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಲ್ದೂರು ಪಿ.ಎಸ್.ಐ. ಧನ್ ರಾಜ್ ನೇತೃತ್ವದ ಪೊಲೀಸರ ತಂಡ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪತ್ತೆಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಮನೆಯ ಹಿಂಭಾಗ ಇರುವ ಕಾಫಿ ತೋಟದಲ್ಲಿ ಅಕ್ರಮವಾಗಿ 12 ಗಾಂಜಾ ಗಿಡಗಳನ್ನು ಬೆಳೆದಿದ್ದ ಎನ್ನಲಾಗಿದೆ. ಈ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈಗ್ಗೆ ಕೆಲ ದಿನಗಳ ಹಿಂದೆ ಜಿಲ್ಲೆಯ ಮಲ್ಲಂದೂರು ಠಾಣಾ ವ್ಯಾಪ್ತಿಯಲ್ಲಿಯೂ ಕಾಫಿ ತೋಟದಲ್ಲಿ ಗಾಂಜಾಗಿಡ ಬೆಳೆಸಿದ ಮಾಹಿತಿಯ ಮೇರೆಗೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ