vidfyuth

 

 

ಕಾಳುಮೆಣಸು ಕೊಯ್ಯುವ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೇಲೂರು ತಾಲ್ಲೂಕಿನ ಅರೇಹಳ್ಳಿ ಸಮೀಪದ ದೊಡ್ಡಸಾಲವರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಗ್ರಾಮದ ಕಾಫಿ ಬೆಳೆಗಾರರೊಬ್ಬರ ತೋಟದಲ್ಲಿ ಕಾಳುಮೆಣಸು ಕೊಯ್ಯುವಾಗ ಕಾರ್ಮಿಕ ಸಮೀರ್ ಎಂಬುವವರು ವಿದ್ಯುತ್ ಶಾಕ್ ಗೆ ಬಲಿಯಾಗಿದ್ಧಾರೆ.

ಅಲ್ಯೂಮಿನಿಯಂ ಏಣಿ ಬಳಸಿ ಮೆಣಸು ಕೊಯ್ಯುತ್ತಿದ್ದಾಗ ತೋಟದ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ಲೈನಿಗೆ ಏಣಿ ತಾಗಿದ್ದು, ಇದರಿಂದ ಕಾರ್ಮಿಕನ ದೇಹದಲ್ಲಿ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಸಮೀರ್ ಕಾಸರಗೋಡು ಮೂಲದವರು ಎನ್ನಲಾಗಿದೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ