air gun

 

 

ಏರ್ ಗನ್ ಹಿಡಿದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಸಮೀಪದ ಮಲ್ಲೇನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಈ ದುರ್ಘಟನೆ ನಡೆದಿದೆ. ಮಲ್ಲೇನಹಳ್ಳಿ ಗ್ರಾಮದ 8 ವರ್ಷದ ಬಾಲಕನೊಬ್ಬ ಏರ್ ಗನ್ ನಿಂದ ಸಿಡಿದ ಗುಂಡಿಗೆ ಬಲಿಯಾಗಿದ್ದಾನೆ.

ಆಟವಾಡುವ ಗನ್ ಎಂದು ಅಂದುಕೊಂಡು ಏರ್‌ ಗನ್‌ (Air Gun) ಇಟ್ಟುಕೊಂಡು ಆಡುವಾಗ ಬಾಲಕ ಟ್ರಿಗರ್‌ ಒತ್ತಿದ್ದು, ಮಿಸ್‌ ಫೈರ್‌ (misfire) ಆಗಿ ತನ್ನ ಎದೆಗೇ ಸ್ವಯಂ ಸಿಡಿಸಿಕೊಂಡಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿ-ಪಿಕ್ಕಿ ತಾಂಡಾದಲ್ಲಿ ಘಟನೆ ನಡೆದಿದೆ. ವಿಷ್ಣು ರಾಜ್ (8) ಮೃತ ಬಾಲಕ. ಏರ್ ಗನ್ ಮಿಸ್ ಫೈರ್ ಆಗಿದ್ದು, ಬಾಲಕನ ಎದೆಯ ಭಾಗಕ್ಕೆ ಗುಂಡು ಸಿಡಿದಿದೆ. ಹೀಗಾಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಷಕರ ನಿರ್ಲಕ್ಷ್ಯದಿಂದ ಬಾಲಕ ತನ್ನ ಜೀವ ಕಳೆದುಕೊಂಡಿದ್ದಾನೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ