12mdg1A (2)

 

 

ದೇಶ ಉನ್ನತ ಮಟ್ಟದಲ್ಲಿ ಸಾಗಲು ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಲು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರೀಕರೂ ತಮ್ಮ ಮತದಾನದ ಹಕ್ಕು ಚಲಾಯಿಸಬೇಕೆಂದು ಮೂಡಿಗೆರೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ದಯಾವತಿ ಹೇಳಿದರು.

ಅವರು ಶುಕ್ರವಾರ ಪಟ್ಟಣದ ತಾ.ಪಂ. ಆವರಣದಲ್ಲಿ ಭಾರತ್ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಲ್ಲಿ ಜಾಗೃತಿ ಅಭಿಯಾನದ ಬೈಕ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮತದಾನ ಮಾಡುವುದು ಪತ್ರಿಯೊಬ್ಬರ ಹಕ್ಕು ಹಾಗೂ ಕರ್ತವ್ಯ ಕೂಡ. ಯಾವುದೇ ಆಮಿಷಕ್ಕೆ ಒಳಗಾಗದೇ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಚುನಾವಣಾ ಆಯೋಗ 85 ವರ್ಷ ಮೇಲ್ಪಟ್ಟ ವಯೋವೃದ್ಧರು ಹಾಗೂ ಮತಗಟ್ಟೆಗೆ ಬರಲು ಸಾಧ್ಯವಾಗದ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ನಡೆಸಲು ಅವಕಾಶ ನೀಡಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

18 ವರ್ಷ ಮೇಲ್ಪಟ ಹೊಸದಾಗಿ ಸೇರ್ಪಡೆಗೊಂಡ ಮತದಾರರು 1950 ಹೆಲ್ಪ್‍ಲೈನ್ ಸಂಖ್ಯೆ ಅಥವಾ ಓಟರ್ ಹೆಲ್ಪ್‍ಲೈನ್ ಆಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರಿರುವ ಬಗ್ಗೆ ವೀಕ್ಷಿಸಬಹುದು. ಈಗಾಗಲೆ ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತದಾನದ ಪವಿತ್ರತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಏ.26ರಂದು ತಮ್ಮ ಮತಗಟ್ಟೆಗೆ ತೆರಳಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ತಾಲೂಕಿನ ವಿವಿಧ ಗ್ರಾ.ಪಂ. ಪಿಡಿಒಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ