ಮೂಡಿಗೆರೆ ಪಿಸಿಎಅರ್ ಡಿ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಹೆಚ್.ಕೆ. ಕಾಳಯ್ಯ(80 ವರ್ಷ) ಸೋಮವಾರ ಸಂಜೆ ನಿಧನರಾಗಿದ್ದಾರೆ.
ಮೂಲತಃ ಮೂಡಿಗೆರೆ ತಾಲ್ಲೂಕಿನ ಹಳೇಕೆರೆ ಗ್ರಾಮದವರಾದ ಕಾಳಯ್ಯ ಪ್ರಸ್ತುತ ಮೂಡಿಗೆರೆ ಪಟ್ಟಣದಲ್ಲಿ ವಾಸವಾಗಿದ್ದರು.
ಮೂಡಿಗೆರೆ ಪಿಸಿಎಆರ್ ಡಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ನಿವೃತ್ತಿಯ ಸಮಯದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದರು. ಬ್ಯಾಂಕ್ ನ ಮೂಲಕ ರೈತರಿಗೆ ಉತ್ತಮ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.
ಕಾಳಯ್ಯ ನಿವೃತ್ತಿಯ ನಂತರ ಜೆ.ಡಿ.ಎಸ್ ಪಕ್ಷವನ್ನು ಸೇರಿ ಒಮ್ಮೆ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು.
ಇವರ ಪತ್ನಿ ಪಾರ್ವತಮ್ಮ ಮೂಡಿಗೆರೆ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಮೊಮ್ಮಕ್ಕಳು. ಆಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇಂದು (ಮಂಗಳವಾರ) ಸಂಜೆ 3.ಗಂಟೆಯವರೆಗೆ ಮೂಡಿಗೆರೆ ಜೆ.ಎಂ.ರಸ್ತೆಯಲ್ಲಿರುವ ಅವರ ಮನೆಯಲ್ಲಿ ಪಾರ್ಥೀವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುತ್ತದೆ. ಸಂಜೆ 4 ಗಂಟೆಗೆ ಮೂಡಿಗೆರೆಯ ಬೀಜುವಳ್ಳಿ ರೋಟರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.



